ದೇಶ

ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ರೈಲು: 7 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

Manjula VN
ರಾಯ್'ಬರೇಲಿ: ಉತ್ತರಪ್ರದೇಶದ ಹರಂಚದ್ಪುರ ರೈಲ್ವೇ ನಿಲ್ದಾಣದ ಬಳಿ ಫರಕ್ಕಾ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. 
ಇಂದು ಬೆಳಿಗ್ಗೆ 6 ಬೋಗಿ ಇದ್ದ ಫರಕ್ಕಾ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 
ಘಟನಾ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಲಖನೌ ಹಾಗೂ ವಾರಣಾಸಿ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. 
ಘಟನೆ ಕುರಿತಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು ಮಾಹಿತಿ ಪಡೆದುಕೊಂಡಿದ್ದು, ಆರೋಗ್ಯ, ಎನ್'ಡಿಆರ್'ಎಫ್ ಪಡೆ ಹಾಗೂ ಪೊಲೀಸ್ ಇಲಾಖೆ ಅಗತ್ಯ ಕ್ರಮ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. 
ಇನ್ನು ಘಟನೆಯಲ್ಲಿ ಕುಟುಂಬಸ್ಥರನ್ನು ಕಳೆದುಕೊಂಡವರ ಕುರಿತಂತೆ ಯೋಗಿ ಆದಿತ್ಯಾನಾಥ್ ಅವರು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದು, ಡಿಜಿಪಿಯವರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. 
SCROLL FOR NEXT