ಒಡಿಶಾ, ಆಂಧ್ರ ಪ್ರದೇಶಕ್ಕೆ 'ತಿತ್ಲಿ' ಚಂಡಮಾರುತ ಭೀತಿ: ರೆಡ್ ಅಲರ್ಟ್ ಘೋಷಣೆ 
ದೇಶ

ಒಡಿಶಾ, ಆಂಧ್ರ ಪ್ರದೇಶಕ್ಕೆ 'ತಿತ್ಲಿ' ಚಂಡಮಾರುತ ಭೀತಿ: ರೆಡ್ ಅಲರ್ಟ್ ಘೋಷಣೆ

ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತವಾಗಿ ಒಡಿಶಾ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಭುವನೇಶ್ವರ್: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತವಾಗಿ ಒಡಿಶಾ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಚಂಡಮಾರುತ 'ತಿತ್ಲಿ'ಯ ಪರಿಣಾಮ ತೀವ್ರ ಸ್ವರೂಪದ್ದಾಗಿರುವ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಒಡಿಶಾದ ಗೋಪಾಲ್ಪುರ ಹಾಗೂ ಆಂಧ್ರ ಪ್ರದೇಶದ ಕಳಿಂಗಪಟ್ಟಣಂ ನಡುವೆ ಗುರುವಾರ ಬೆಳಿಗ್ಗೆ 145 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಸಲಾಗಿದೆ."ತಿತ್ಲಿ ಗಂಟೆಗೆ 10 ಕಿ.ಮೀ. ವೇಗದಲ್ಲಿ ಬೀಸಲಿದ್ದು ಚಂಡಮಾರುತ ಪ್ರಭಾವವು ಒಡಿಶಾದ ಗೋಪಾಲ್ಪುರದಿಂದ  370 ಕಿಮೀ  ಆಗ್ನೇಯಕ್ಕೆ ಹೆಚ್ಚಾಗಿರಲಿದೆ ಎಂದು ಐಎಂಡಿ ಬುಲೆಟಿನ್ ನಲ್ಲಿ ಹೇಳಿದೆ. ಗೋಪಾಲ್ಪುರ ಹಾಗೂ ಕಳಿಂಗಪಟ್ಟಣಂ ನಡುವೆ ಭೂಕುಸಿತವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಂದಿನ 18 ಗಂಟೆಗಳಲ್ಲಿ ತೀವ್ರತರವಾದ ಚಂಡಮಾರುತದ ಹಾವಳಿ ಎದುರಾಗಲಿದೆ ಎಂದು ಅದು ಎಚ್ಚರಿಸಿದೆ.
ಒಡಿಶಾ ಶಾಲೆಗಳಿಗೆ ರಜೆ
ಚಂಡಮಾರುತದ ಮುನ್ಸೂಚನೆ ಕಾರಣದಿಂದ ಒಡಿಶಾದ ನಾಲ್ಕು ಜಿಲ್ಲೆಗಳಾದ ಗುಂಜಮ್ ಗಜಪತಿ, ಪುರಿ, ಜಗತ್ ಸಿಂಗ್ ಪುರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೊಷಣೆ ಂಆಡಲಾಗಿದೆ.ಅಲ್ಲದೆ ಜಿಲ್ಲಾಧಿಕಾರಿಗಳು ಚಂಡಮಾರುತ ಹಾನಿಗೊಳಗಾದಲ್ಲಿ ತುರ್ತು ಪರಿಹಾರ ಕ್ರಮ ಕೈಗೊಳ್ಳಲು ಸೂಚನೆ ರವಾನಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT