ಅಮಿತ್ ಶಾ 
ದೇಶ

ಮೋದಿ ಜನಪ್ರಿಯತೆ ಬಗ್ಗೆ ಕೆಸಿಆರ್ ಗೆ ಭಯ: ಶಾ

ತೆಲಂಗಾಣ ಚುನಾವಣಾ ಪ್ರಚಾರದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ರಾಜ್ಯದ ಹಾಲಿ ಮುಖ್ಯಮಂತ್ರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕುರಿತು ಭಯವಿದೆ ಎಂದು ಹೇಳಿದ್ದಾರೆ.

ಕರೀಂ ನಗರ್: ತೆಲಂಗಾಣ ಚುನಾವಣಾ ಪ್ರಚಾರದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ರಾಜ್ಯದ ಹಾಲಿ ಮುಖ್ಯಮಂತ್ರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕುರಿತು ಭಯವಿದೆ ಎಂದು ಹೇಳಿದ್ದಾರೆ. 
ಕರೀಂನಗರದಲ್ಲಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅಮಿತ್ ಶಾ, ರಾಜ್ಯ ವಿಧಾನಸಭಾ ಚುನಾವಣೆ ಲೋಕಸಭಾ ಚುನಾವಣೆ ಜೊತೆಗೇ ಅಂದರೆ 2019 ರ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಬೇಕಿತ್ತು. ಆದರೆ ಅವಧಿಗೂ ಮುನ್ನವೇ ಚುನಾವನೆ ನಡೆಸಲು ತೀರ್ಮಾನಿಸಿರುವ ಟಿಆರ್ ಎಸ್ ರಾಜ್ಯದ ಜನತೆ ಮೇಲೆ ನೂರಾರು ಕೋಟಿ ಹೊರೆ ಹೊರಿಸಿದ್ದಾರೆ ಎಂದು ಆರೋಪಿಸಿದ್ದಾರೆ. 
ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ನೀಡಿದರೆ ತೆಲಂಗಾಣವನ್ನು ಉಳಿದ ಬಿಜೆಪಿ ಆಡಳಿತವಿರುವ ರಾಜ್ಯಗಳಂತೆಯೇ ಅಭಿವೃದ್ಧಿ ಮಾಡಿ ಎಂಐಎಂ ನಾಯಕ ಓವೈಸಿ ಕೈಗಳಿಂದ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ.  ಇದೇ ವೇಳೆ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸದೇ ಇರುವ ತೆಲಂಗಾಣ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಯೋಜನೆಯನ್ನು ಜಾರಿಗೊಳಿಸಿದರೆ ಮೋದಿ ಅವರ ಜನಪ್ರಿಯತೆ ಹೆಚ್ಚಾಗುತ್ತದೆ ಎಂದು ಕೆಸಿಆರ್ ಭಯಗೊಂಡಿದ್ದಾರೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!