ನವದೆಹಲಿ: ಬೆಲೆ ಸಂಬಂಧಪಟ್ಟ ಮಾಹಿತಿ ಬೇಡ, ರಫೇಲ್ ಒಪ್ಪಂದ ಕುರಿತ ಮಾಹಿತಿಗಳನ್ನು ನೀಡಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ಸೂಚನೆ ನೀಡಿದೆ.
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತ ಮಾಹಿತಿ ನೀಡುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್, ಬೆಲೆಗೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ನ್ಯಾಯಾಲಯ ಗಮನಹರಿಸುವುದಿಲ್ಲ ಆದರೆ, ಒಪ್ಪಂದ ಕುರಿತ ಮಾಹಿತಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿ ಎಂದು ಸೂಚಿಸಿದೆ.
ರೂ.59 ಸಾವಿರ ಕೋಟಿ 36 ಯುದ್ಧ ವಿಮಾನಗಳನ್ನು ಫ್ರಾನ್ಸ್ ನಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಒಪ್ಪಂದದಲ್ಲಿ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಭಾರೀ ಅವ್ಯವಹಾರ ನಡೆಸಿದ್ದು, ಒಪ್ಪಂದ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಕೋರಿ ಎಂ.ಎಲ್.ಶರ್ಮಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics