ಬಿಹಾರ ಸಿಎಂ ನಿತೀಶ್ ಕುಮಾರ್ ಮೇಲೆ ಚಪ್ಪಲಿ ಎಸೆದ ವ್ಯಕ್ತಿ, ಬಂಧನ
ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಅವರ ಮೇಲೆ ವ್ಯಕ್ತಿಯೊಬ್ಬ....
ಪಾಟ್ನಾ: ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಅವರ ಮೇಲೆ ವ್ಯಕ್ತಿಯೊಬ್ಬ ಚಪ್ಪಲಿ ಎಸೆದ ಘಟನೆ ಗುರುವಾರ ನಡೆದಿದೆ.
ಇಂದು ಪಕ್ಷದ ಕಾರ್ಯಕ್ರಮದಲ್ಲಿ ಹಿರಿಯ ನಾಯಕರೊಂದಿಗೆ ವೇದಿಕೆಯಲ್ಲಿ ಆಸೀನರಾಗಿದ್ದ ಸಿಎಂ ನಿತೀಶ್ ಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಯುವಕನೊಬ್ಬ ಚಪ್ಪಲಿ ಎಸೆದಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯುವಕ ಎಸೆದ ಚಪ್ಪಲಿ ವೇದಿಕೆಯ ಮುಂಭಾಗದಲ್ಲಿ ಕುಳಿತಿದ್ದ ಸಭಿಕರ ಮೇಲೆ ಬಿದ್ದಿದ್ದು, ನಿತೀಶ್ ಕುಮಾರ್ ಅವರಿಗೆ ತಾಗಲಿಲ್ಲ ಎಂದು ವರದಿಗಳು ತಿಳಿಸಿವೆ.
ಚಪ್ಪಲಿ ಎಸೆದ ವ್ಯಕ್ತಿಯನ್ನು ಚಂದನ್ ಎಂದು ಗುರುತಿಸಲಾಗಿದೆ. ಆತ ಈ ಕೃತ್ಯ ಎಸಗಿದೊಡನೆಯೇ ಆತನನ್ನು ಪಕ್ಷದ ಕಾರ್ಯಕರ್ತರು ಹಿಡಿದು ಎಳೆದಾಡಿ ಹಿಗ್ಗಾಮುಗ್ಗ ಹೊಡೆದರೆಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಚಂದನ್ ನನ್ನು ಪೊಲೀಸರು ಅಲ್ಲಿಂದ ಹೊರಗೆ ಕರೆದೊಯ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.