ತಿತಿಲಿ ಚಂಡಮಾರುತ 
ದೇಶ

ತಿತ್ಲಿ ಚಂಡಮಾರುತ: ಪಾರಾಗಲು ಗುಹೆಯಲ್ಲಿ ಆಶ್ರಯ ಪಡೆದಿದ್ದ 12 ಮಂದಿ ಸಾವು, ನಾಲ್ವರು ನಾಪತ್ತೆ

ತಿತ್ಲಿ ಎಂಬ ಪ್ರಬಲ ಚಂಡಮಾರುತ ಒಡಿಶಾ ರಾಜ್ಯಕ್ಕೆ ಅಪ್ಪಳಿಸಿದ್ದು, ಚಂಡಮಾರುತದಿಂದ ಪಾರಾಗುವ ಸಲುವಾಗಿ ಗುಹೆಯೊಂದರಲ್ಲಿ ಆಶ್ರಯ ಪಡೆದಿದ್ದ 12 ಮಂದಿ ಮೃತಪಟ್ಟು, ನಾಲ್ವರು ನಾಪತ್ತೆಯಾಗಿದ್ದಾರೆ...

ಭುವನೇಶ್ವರ್: ತಿತ್ಲಿ ಎಂಬ ಪ್ರಬಲ ಚಂಡಮಾರುತ ಒಡಿಶಾ ರಾಜ್ಯಕ್ಕೆ ಅಪ್ಪಳಿಸಿದ್ದು, ಚಂಡಮಾರುತದಿಂದ ಪಾರಾಗುವ ಸಲುವಾಗಿ ಗುಹೆಯೊಂದರಲ್ಲಿ ಆಶ್ರಯ ಪಡೆದಿದ್ದ 12 ಮಂದಿ ಮೃತಪಟ್ಟು, ನಾಲ್ವರು ನಾಪತ್ತೆಯಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ. 
ಗಜಪತಿ ಜಿಲ್ಲೆಯ ಬಾರ್ಗರಾ ಗ್ರಾಮದ ಮನೆಗಳ ಛಾವಣಿಗಳು ಚಂಡಮಾರುತದ ರಭಸಕ್ಕೆ ಹಾರಿಹೋಗಿದ್ದವು. ಆದಾದ ಬಳಿಕ ಅಲ್ಲಿನ 22 ಮಂದಿ ಸ್ಥಳದಲ್ಲಿಯೇ ಇದ್ದ ಗುಹೆಯೊಂದರಲ್ಲಿ ಆಶ್ರಯ ಪಡೆದಿದ್ದರು. ಆದರೆ, ಮಳೆಯ ರಭಸಕ್ಕೆ ಆ ಗುಹೆಯ ಕಲ್ಲು ಜನರ ಮೇಲೆ ಕುಸಿದು ಬಿದ್ದಿದೆ. 
ಪರಿಣಾಮ ಮೂವರು ಮಕ್ಕಳು ಸೇರಿ 12 ಮಂದಿ ಮೃತಪಟ್ಟಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಇನ್ನುಳಿದ 6 ಮಂದಿ ಸುರಕ್ಷಿತವಾಗಿ ಹಳ್ಳಿಗೆ ಆಗಮಿಸಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆಂದು ವರದಿಗಳು ತಿಳಿಸಿವೆ. 
ಪದೇ ಪದೇ ಚಂಡಮಾರುತ ಎದುರಿಸುವ ರಾಜ್ಯಗಳಲ್ಲಿ ಒಡಿಶಾ ಯಾವಾಗಲೂ ಮುಂದು. ಸದಾ ಕಾಲ ನೈಸರ್ಗಿಕ ವಿಕೋಪಗಳಿಗೆ ತುತ್ತಾಗಿವ ಅಪಾಯವಿರುವ ಒಡಿಶಾ ರಾಜ್ಯ ಸದಾಕಾಲ ಸಿದ್ಧವಾಗಿರುತ್ತದೆ. ಆದರೂ ತಿತ್ಲಿ ಚಂಡಮಾರುತ ಒಡಿಶಾಗೆ ಭಾರೀ ಹೊಡೆತವನ್ನೇ ನೀಡಿದೆ. ಚಂಡಮಾರುತ ಸುಮಾರು 38.7 ಲಕ್ಷ ಜನರ ಮೇಲೆ ಗಂಭೀರ ಪರಿಣಾಮ ಬೀರಿದೆ. 1000ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. 
ಚಂಡಮಾರತುದಿಂದಾಗಿ ಸದಾ ಕಾಲ ತತ್ತರಿಸುತ್ತಲೇ ಇರುವ ಗಂಜಮ್, ಗಜಪತಿ ಹಾಗೂ ರಾಯಗಢ ಜಿಲ್ಲೆಯ ಪರಿಸ್ಥಿತಿಯಂತೂ ಹೇಳತೀರದಾಗಿದೆ. 
ಚಂಡಮಾರುತದಿಂದಾಗಿ ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿರುವ ಗಂಜಮ್, ಗಜಪತಿ ಹಾಗೂ ರಾಯಘಡ ಜಿಲ್ಲೆಗಳ ಪರಿಸ್ಥಿತಿಯನ್ನು ಸ್ವತಃ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸುವ ಮೂಲಕ ಪರಿಶೀಲನೆ ನಡೆಸುತ್ತಿದ್ದಾರೆ. 
ಈ ನಡುವೆ ಆಂಧ್ರಪ್ರದೇಶ ರಾಜ್ಯದ ಮೇಲೂ ಕೂಡ ಚಂಡಮಾರುತ ಗಂಭೀರ ಪರಿಣಾಮ ಬೀರಿದ್ದು, ಶ್ರೀಕಕುಲಂ ಜಿಲ್ಲೆಯಲ್ಲಿ ಪ್ರವಾಹ ಎದುರಾಗಿದೆ. ವಾಮಸಧರ, ಮಹೇಂದ್ರ ತನಯ ಹಾಗೂ ಬಹುಡಾ ನದಿಗಳು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ ಎಂದು ತಿಳಿದುಬಂದಿದೆ. 
ಭಾರತ ದೇಶ ಪರ್ಯಾಯ ಪ್ರಸ್ಥಭೂಮಿಯಾಗಿದೆ. ಅಂದರೆ, ದೇಶದ ಮೂರು ಭಾಗಗಳಲ್ಲಿ ನೀರು ಆವರಿಸಿದೆ. ಪೂರ್ವದಲ್ಲಿ ಬಂಗಾಳ ಕೊಲ್ಲಿ, ಪಶ್ಚಿಮದಲ್ಲಿ ಅರಬ್ಬಿ ಸಮುದ್ರ, ದಕ್ಷಿಣತುದಿಯಲ್ಲಿ ಹಿಂದೂ ಮಹಾಸಾಗರವಿದೆ. ಆದರೂ ಪೂರ್ವ ಭಾಗದ (ಬಂಗಾಳ ಕೊಲ್ಲಿ) ವ್ಯಾಪ್ತಿಯ ಒಡಿಶಾ, ಆಂಧ್ರಪ್ರದೇಶ, ತಮಿಳುನಾಡು ಹೆಚ್ಚು ಚಂಡಮಾರುತದ ಪ್ರಕ್ಷೋಭಗೆ ಒಳಗಾಗುತ್ತವೆ.
ಇದಕ್ಕೆ ಕಾರಣ ಹೆಚ್ಚು ಉಷ್ಣಾಂಶ. ಹೌದು ಒಡಿಶಾ, ಆಂಧ್ರ, ತಮಿಳುನಾಡು ಬಂಗಾಳ ಕೊಲ್ಲಿ ವ್ಯಾಪ್ತಿಯಲ್ಲಿವೆ. ಬಂಗಾಳ ಕೊಲ್ಲಿಯಲ್ಲಿನ ಉಷ್ಣಾಂಶ ಅರಬ್ಬಿ ಸಮುದ್ರಕ್ಕಿಂತ ಹೆಚ್ಚಿರುತ್ತದೆ. ಈ ಉಷ್ಣಾಂಶವು ತೇವಾಂಶ ಉಳಿಸಿಕೊಳ್ಳಲು ಮತ್ತು ಸೈಕ್ಲೋನ್ ಸೃಷ್ಟಿಗೆ ಕಾರಣವಾಗುತ್ತದೆ. ಅಲ್ಲದೆ, ದಕ್ಷಿಣ ಚೀನಾ ಸಮುದ್ರದಲ್ಲಿ ಏಳುವ ಟೈಫೂನ್ ಗಳು ಬಂಗಾಳ ಕೊಲ್ಲಿ ಮೂಲಕ ಹಾದು ಹೋದಾಗಲೂ ಗಾಳಿಯ ತೇವಾಂಶದಲ್ಲಿ ಏರಿಳಿತಗಳಾಗಿ ಸೈಕ್ಲೋನ್ ಸೃಷ್ಟಿಯಾಗುತ್ತವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT