ಪ್ರಧಾನಿ ಮೋದಿ ಹತ್ಯೆ ಬೆದರಿಕೆ: ದೆಹಲಿ ಪೊಲೀಸ್ ಆಯುಕ್ತರಿಗೆ ಮೇಲ್
ಮುಂಬರುವ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿಯನ್ನು ಹತ್ಯೆ ಮಾಡಲು ದುಷ್ಕರ್ಮಿಗಳು ಪ್ಲ್ಯಾನ್ ಮಾಡಿರುವುದಾಗಿ ಈ ಮೇಲ್ ...
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿಯನ್ನು ಹತ್ಯೆ ಮಾಡಲು ದುಷ್ಕರ್ಮಿಗಳು ಪ್ಲ್ಯಾನ್ ಮಾಡಿರುವುದಾಗಿ ಈ ಮೇಲ್ ಸಂದೇಶ ರವಾನೆಯಾಗಿದೆ.
ಈ ಸಂಬಂಧ ದೆಹಲಿ ಪೊಲೀಸ್ ಕಮಿಷನರ್ ಗೆ ಇ-ಮೇಲ್ನಲ್ಲಿ ಬೆದರಿಕೆ ಒಡ್ಡಿರುವ ದುಷ್ಕರ್ಮಿಗಳು, 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುತ್ತೇವೆ ಎಂದು ಒಂದು ಸಾಲಿನಲ್ಲಿ ತಿಳಿಸಿದ್ದಾರೆ. ಹಾಗೇ ಮೇಲ್ನಲ್ಲಿ ಹತ್ಯೆ ಮಾಡುವ ದಿನಾಂಕ ಮತ್ತು ವೇಳೆಯನ್ನು ನಮೂದಿಸಿದ್ದಾರೆ ಎಂದು ತಿಳಿದು ಬಂದಿದೆ.
ಅಸ್ಸಾಂ ನ ಜೈಲಿನಿಂದ ಇ ಮೇಲ್ ರವಾನೆಯಾಗಿದೆ ಎಂದು ಶಂಕಿಸಲಾಗಿದೆ . ಹೀಗಾಗಿ ಪ್ರಧಾನಿ ಮೋದಿ ಅವರಿಗೆ ಹೆಚ್ಚಿನ ಭದ್ರತೆ ನೀಡಲು ತೀರ್ಮಾನಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.