ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಛತ್ತೀಸ್ಗಢದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ 9 ಮಂದಿ ದುರ್ಮರಣ, 3 ಗಾಯ

ಛತ್ತೀಸ್ಗಢದ ರಾಜ್'ನಂದ್ ಗಾಂವ್ ಎಂಬಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ 9 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ...

ಛತ್ತೀಸ್ಗಢದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ 9 ಮಂದಿ ದುರ್ಮರಣ, 3 ಗಾಯ
Manjula VN
Updated On : 14 Oct 2018, 11:38 am
ರಾಯ್ಪುರ: ಛತ್ತೀಸ್ಗಢದ ರಾಜ್'ನಂದ್ ಗಾಂವ್ ಎಂಬಲ್ಲಿ  ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ 9 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. 
ನವರಾತ್ರಿ ಹಿನ್ನಲೆಯಲ್ಲಿ ಕುಟುಂಬವೊಂದು ಬೊಲೆರೋ ಎಸ್'ಯುವಿ ಕಾರಿನಲ್ಲಿ ದೊಂಗಾರ್ಗರ್ ಟೌನ್'ನಲ್ಲಿರುವ ಮಾ ಬಮ್ಲೇಶ್ವರಿ ದೇಗುಲಕ್ಕೆ ಭೇಟಿ ನೀಡಿದ್ದರು. ದೇಗುಲ ಭೇಟಿ ಬಳಿಕ ಭಿಲ್ಲೈ'ಗೆ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾರೆ. 
ಈ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್'ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ 9 ಮಂದಿ ಸಾವನ್ನಪ್ಪಿದ್ದು, 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. 

Advertisement

Advertisement

ಘಟನೆ ಬಳಿಕ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement