ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ವಿಜಯವಾಡ : ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸರ ದಾಳಿ, 22 ಮಂದಿ ಬಂಧನ !

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು 22 ಮಂದಿ ಬುಕ್ಕಿಗಳು, ಉಪ ಬುಕ್ಕಿಗಳು ಹಾಗೂ ಪಂಟರ್ಸ್ ಗಳನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸಿ. ಹೆಚ್. ದ್ವಾರಕಾ ತಿರುಮಲ ರಾವ್ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
Nagaraja AB
Updated On : 14 Oct 2018, 11:41 am

ವಿಜಯವಾಡ:  ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು  22 ಮಂದಿ ಬುಕ್ಕಿಗಳು,  ಉಪ ಬುಕ್ಕಿಗಳು ಹಾಗೂ ಪಂಟರ್ಸ್ ಗಳನ್ನು ಬಂಧಿಸಿದ್ದಾರೆ ಎಂದು  ನಗರ ಪೊಲೀಸ್ ಆಯುಕ್ತ ಸಿ. ಹೆಚ್. ದ್ವಾರಕಾ ತಿರುಮಲ ರಾವ್ ತಿಳಿಸಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್ ಬಗ್ಗೆ ಖಚಿತ ಮಾಹಿತಿ ಪಡೆದು ಮನೆಯೊಂದರ ಮೇಲೆ   ಸಹಾಯಕ ಆಯುಕ್ತ ಜಿ. ರಾಜೀವ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದ ವೇಳೆ ಮೂವರು ರೆಡ್ ಹ್ಯಾಂಡ್ ಆಗಿ  ಸಿಕ್ಕಿ ಬಿದಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಂಧಿತರನ್ನು ಬುರಿ ಸತ್ಯ ನಾರಾಯಣ, ವಾಸ ಕೊಂಡಲಾ ರಾವ್ ಮತ್ತು ಅಡಪ ವೆಂಕಟ ಕೃಷ್ಣ ರಾವ್ ಎಂದು ಹೇಳಲಾಗಿದೆ.  ಸಪ್ಪಾ ರವಿಚಂದ್ರ   ಬೆಟ್ಟಿಂಗ್ ದಂಧೆಯ ಕಿಂಗ್ ಪಿನ್ ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.  

ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಇತರ 13 ಮಂದಿಯನ್ನು  ಬಂಧಿಸಲಾಗಿದೆ. ಬಂಧಿತರಿಂದ 22 ಮೊಬೈಲ್ ಪೋನ್, 7 ಲಕ್ಷ ಹಣ, ಹಾಗೂ ಒಂದು ಲ್ಯಾಪ್ ಟಾಪ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments