ಗೃಹ ಸಚಿವ ರಾಜನಾಥ ಸಿಂಗ್ 
ದೇಶ

ಇಂಡೋ-ಪಾಕ್ ಗಡಿಯಲ್ಲಿ ಯೋಧರೊಂದಿಗೆ ದಸರಾ ಆಚರಿಸಲು ರಾಜನಾಥ್ ಸಿಂಗ್ ನಿರ್ಧಾರ

ಅತಿ ಸೂಕ್ಷ್ಮ ಪ್ರದೇಶವಾಗಿರುವ ಇಂಡೋ-ಪಾಕ್ ಗಡಿಯಲ್ಲಿ ಭಾರತೀಯ ಸೇನಾ ಯೋಧರೊಂದಿಗೆ ದಸರಾ ಆಚರಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ನಿರ್ಧರಿಸಿದ್ದಾರೆಂದು ಭಾನುವಾರ ತಿಳಿದುಬಂದಿದೆ...

ನವದೆಹಲಿ: ಅತಿ ಸೂಕ್ಷ್ಮ ಪ್ರದೇಶವಾಗಿರುವ ಇಂಡೋ-ಪಾಕ್ ಗಡಿಯಲ್ಲಿ ಭಾರತೀಯ ಸೇನಾ ಯೋಧರೊಂದಿಗೆ ದಸರಾ ಆಚರಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ನಿರ್ಧರಿಸಿದ್ದಾರೆಂದು ಭಾನುವಾರ ತಿಳಿದುಬಂದಿದೆ. 
ಯೋಧರೊಂದಿಗೆ ದಸರಾ ಆಚರಿಸಲು ಭಾರತ-ಪಾಕಿಸ್ತಾನ ಗಡಿಗೆ ತೆರಳಲಿರುವ ರಾಜನಾಥ್ ಸಿಂಗ್ ಅವರು, ಈ ವೇಳೆ ಸೇನಾಪಡೆಯ ಶಸ್ತ್ರಾಸ್ತ್ರಗಳು, ಆಯುಧಗಳಿಗೆ ಪೂಜೆ ಸಲ್ಲಿಸಲಿದ್ದಾರೆಂದು ವರದಿಗಳು ತಿಳಿಸಿವೆ. 
ಕೇಂದ್ರ ಸರ್ಕಾರದ ಹಿರಿಯ ಸಚಿವರೊಬ್ಬರು ಭಾರತದ ಗಡಿಯಲ್ಲಿ ಸೇನೆಯ ಶಸ್ತ್ರಾಸ್ತ್ರಗಳಿಗೆ ಪೂಜೆ ನೆರವೇರಿಸುತ್ತಿರುವುದು ಇದೇ ಮೊದಲು. 
ರಾಜಸ್ಥಾನದ ಬಿಕನೇರ್ ಬಳಿಯಿರುವ ಭಾರತ ಮತ್ತು ಪಾಕಿಸ್ತಾನ ಗಡಿಗೆ ಅ.19 ರಂದು ಗೃಹ ಸಚಿವರು ಭೇಟಿ ನೀಡಲಿದ್ದು, ಈ ವೇಳೆ ಯೋಧರೊಂದಿಗೆ ದಸರಾ ಹಬ್ಬವನ್ನು ಆಚರಿಸಲಿದ್ದಾರೆಂದು ಗೃಹ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!