ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಲೈಂಗಿಕ ಕಿರುಕುಳ ಆರೋಪಗಳು ಕುರಿತು ಶೀಘ್ರದಲ್ಲೇ ಪ್ರತಿಕ್ರಿಯೆ ನೀಡುವೆ: ಎಂ.ಜೆ.ಅಕ್ಬರ್

ನನ್ನ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಕಿರುಕುಳ ಆರೋಪಗಳ ಕುರಿತು ಶೀಘ್ರದಲ್ಲಿಯೇ ಪ್ರತಿಕ್ರಿಯೆ ನೀಡುವೆ ಎಂದು ವಿದೇಶಾಂಗ ಖಾತೆಗಳ ರಾಜ್ಯ ಸಚಿವ ಎಂ.ಜೆ.ಅಕ್ಬರ್ ಅವರು ಭಾನುವಾರ ಹೇಳಿದ್ದಾರೆ...

ವಿದೇಶಾಂಗ ಖಾತೆಗಳ ರಾಜ್ಯ ಸಚಿವ ಎಂ.ಜೆ.ಅಕ್ಬರ್
Manjula VN
Updated On : 14 Oct 2018, 9:29 am
ನವದೆಹಲಿ: ನನ್ನ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಕಿರುಕುಳ ಆರೋಪಗಳ ಕುರಿತು ಶೀಘ್ರದಲ್ಲಿಯೇ ಪ್ರತಿಕ್ರಿಯೆ ನೀಡುವೆ ಎಂದು ವಿದೇಶಾಂಗ ಖಾತೆಗಳ ರಾಜ್ಯ ಸಚಿವ ಎಂ.ಜೆ.ಅಕ್ಬರ್ ಅವರು ಭಾನುವಾರ ಹೇಳಿದ್ದಾರೆ. 
ವಿದೇಶ ಪ್ರವಾಸ ಕೈಗೊಂಡಿದ್ದ ಅಕ್ಬರ್ ಅವರು ಇಂದು ಬೆಳಿಗ್ಗೆಯಷ್ಟೇ ರಾಜಧಾನಿ ದೆಹಲಿಗೆ ಆಗಮಿಸಿದ್ದಾರೆ. 
ಈ ವೇಳೆ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನೈಜೀರಿಯಾಗೆ ಅಧಿಕೃತ ಭೇಟಿ ನೀಡಿದ್ದೆ. ಆರೋಪಗಳ ಕುರಿತು ಶೀಘ್ರದಲ್ಲಿಯೇ ಪ್ರತಿಕ್ರಿಯೆ ನೀಡುವೆ ಎಂದು ಹೇಳಿದ್ದಾರೆ. 

Advertisement

Advertisement

ಕೆಲ ದಿನಗಳ ಹಿಂದಷ್ಟೇ ಮಹಿಳಾ ಪತ್ರಕರ್ತೆಯೊಬ್ಬರು ದಿ ಟೆಲಿಗ್ರಾಫ್ ಪತ್ರಿಕೆಯ ಸಂಪಾದಕರಾಗಿದ್ದ ಎಂ.ಜೆ.ಅಕ್ಬರ್ ಅವರು ತಮಗೆ ವೃತ್ತಿ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪ ಮಾಡಿದ್ದರು. 
ಈ ಆರೋಪ ಸಂಬಂಧ ವಿರೋಧ ಪಕ್ಷಗಳು ಅಕ್ಬರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments