ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನಾನು ಪ್ರಚಾರಕ್ಕಿಳಿದರೆ ಕಾಂಗ್ರೆಸ್ ಸೋಲು ಕಾಣಲಿದೆ: ದಿಗ್ವಿಜಯ್ ಸಿಂಗ್ ಗೊಂದಲದ ಹೇಳಿಕೆ

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರದ ಸಿದ್ಧತೆಗಳನ್ನು ನಡೆಸುತ್ತಿದ್ದು, ಈ ನಡುವಲ್ಲೇ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಗೊಂದಲಕರವಾದ ಹೇಳಿಕೆಯೊಂದನ್ನು ನೀಡಿದ್ದಾರೆ...

ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್
Manjula VN
Updated On : 16 Oct 2018, 6:44 am
ನವದೆಹಲಿ: ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರದ ಸಿದ್ಧತೆಗಳನ್ನು ನಡೆಸುತ್ತಿದ್ದು, ಈ ನಡುವಲ್ಲೇ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಗೊಂದಲಕರವಾದ ಹೇಳಿಕೆಯೊಂದನ್ನು ನೀಡಿದ್ದಾರೆ. 
ಕಾಂಗ್ರೆಸ್ ಪರವಾಗಿ ನಾನು ಪ್ರಚಾರ ನಡೆಸಿದರೆ ಅಥವಾ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಿದರೆ ಪಕ್ಷ ಸೋಲು ಕಾಣಲಿದೆ ಎಂದು ಹೇಳಿದ್ದಾರೆ. 
ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಅವರು, ಪಕ್ಷದಿಂದ ಯಾರಿಗೇ ಟಿಕೆಟ್ ದೊರೆತರೂ, ಶತ್ರುಗಳಿಗೇ ಟಿಕೆಟ್ ದೊರೆತರೂ ಕೂಡ ಅವರನ್ನು ಗೆಲ್ಲಿಸಿ. ಪ್ರಚಾರ ಮಾಡದಿರುವುದು, ಭಾಷಣ ಮಾಡದೇ ಇರುವುದಷ್ಟೇ ನನ್ನ ಕೆಲಸ. ನಾನು ಭಾಷಣ ಮಾಡುವುದರಿಂದ ಕಾಂಗ್ರೆಸ್'ಗೆ ಅಲ್ಪ ಮತಗಳು ಬೀಳುತ್ತವೆ. ಹೀಗಾಗಿ ನಾನು ಭಾಷಣ, ಪ್ರಚಾರ ಮಾಡುವುದಿಲ್ಲ ಎಂದು ಹೇಳಿದ್ದಾರೆ. 

Advertisement

Advertisement

ದಿಗ್ವಿಜಯ್ ಸಿಂಗ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಾದೇಶಿಕ ಸಮಿತಿ ಅಧ್ಯಕ್ಷ ಕಮಲ್ ನಾಥ್ ಅವರು, ಯಾವ ಸಂದರ್ಭದಲ್ಲಿ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆಂಬುದು ನನಗೆ ತಿಳಿದಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments