ನವದೆಹಲಿ: ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್ಎಸ್'ಯುಐ) ಅಧ್ಯಕ್ಷ ಸ್ಥಾನಕ್ಕೆ ಫೈರೋಜ್ ಖಾನ್ ಮಂಗಳವಾರ ರಾಜಿನಾಮೆ ನೀಡಿದ್ದಾರೆ.
ಫೈರೋಜ್ ಖಾನ್ ವಿರುದ್ಧ ಮಹಿಳೆಯರೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಪ್ರಕರಣ ಸಂಬಂಧ ಕಾಂಗ್ರೆಸ್ ಮೂವರು ಸದಸ್ಯರ ಸಮಿತಿಯೊಂದನ್ನು ರಚಿಸಿತ್ತು. ಇದಲ್ಲದೆ, ಛತ್ತೀಸ್ಗಢದ ಕಾಂಗ್ರೆಸ್ ಕಾರ್ಯಕರ್ತೆಯಾಗಿರುವ ಯುವತಿ ಪೊಲೀಸರಿಗೆ ದೂರು ದಾಖಲಿಸಿದ್ದಳು. ಅಲ್ಲದೆ, ತನ್ನ ಜೀವಕ್ಕೆ ಬೆದರಿಕೆಯಿಂದೆ ಎಂದೂ ಕೂಡ ಹೇಳಿಕೊಂಡಿದ್ದಳು.
ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಫೈರೋಜ್ ಖಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅಂಗೀಕರಿಸಿದ್ದಾರೆಂದು ತಿಳಿದುಬಂದಿದೆ.