ದೇಶ

ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: ಅಡಗಿ ಕುಳಿತಿರುವ ಟಾಪ್ ಎಲ್ಇಟಿ ಕಮಾಂಡರ್

Manjula VN
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆಗಳು ಎನ್'ಕೌಂಟರ್ ನಡೆಸುತ್ತಿದ್ದು, ಸ್ಥಳದಲ್ಲಿ ಟಾಪ್ ಎಲ್ಇಟಿ (ಲಷ್ಕರ್-ಇ-ತೊಯ್ಬಾ)ಉಗ್ರ ಸಂಘಟನೆಯ ಕಮಾಂಡರ್ ಸೇರಿ ಹಲವು ಉಗ್ರರು ಅಡಗಿ ಕುಳಿತಿದ್ದಾರೆಂದು ಬುಧವಾರ ತಿಳಿದುಬಂದಿದೆ. 
ಶ್ರೀನಗರದ ಫತೇಹ್ ಕಡಲ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಭಾರತೀಯ ಸೇನಾಪಡೆ ಹಾಗೂ ಸಿಆರ್'ಪಿಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. 
ಕೂಡಲೇ ಸ್ಥಳವನ್ನು ಸುತ್ತವರೆದ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಲು ಆರಂಭಿಸಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಎನ್'ಕೌಂಟರ್ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ವರದಿಗಳು ತಿಳಿಸಿವೆ. 
ಉಗ್ರರು ದಾಳಿ ನಡೆಸಿರುವ ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಅಧಿಕಾರಿಗಳು ಸ್ಥಳದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. 
SCROLL FOR NEXT