ಸಂಗ್ರಹ ಚಿತ್ರ 
ದೇಶ

ಶ್ರೀನಗರ ಎನ್'ಕೌಂಟರ್: ಕಾರ್ಯಾಚರಣೆ ವೇಳೆ ವರದಿ ಮಾಡುತ್ತಿದ್ದ ಪತ್ರಕರ್ತರಿಗೆ ಥಳಿಸಿದ ಭದ್ರತಾ ಪಡೆಗಳು

ಜಮ್ಮು ಮತ್ತು ಕಾಶ್ಮೀರದ ಶ್ರೀನಗರಲ್ಲಿ ಉಗ್ರರ ವಿರುದ್ಧ ಎನ್ ಕೌಂಟರ್ ನಡೆಸುತ್ತಿದ್ದ ಸಂದರ್ಭದಲ್ಲಿ ವರದಿ ಮಾಡುತ್ತಿದ್ದ ಪತ್ರಕರ್ತರನ್ನು ಭದ್ರತಾ ಪಡೆಗಳು ಥಳಿಸಿರುವ ಘಟನೆ ಬುಧವಾರ ನಡೆದಿದೆ...

ಶ್ರೀನಗರ; ಜಮ್ಮು ಮತ್ತು ಕಾಶ್ಮೀರದ ಶ್ರೀನಗರಲ್ಲಿ ಉಗ್ರರ ವಿರುದ್ಧ ಎನ್ ಕೌಂಟರ್ ನಡೆಸುತ್ತಿದ್ದ ಸಂದರ್ಭದಲ್ಲಿ ವರದಿ ಮಾಡುತ್ತಿದ್ದ ಪತ್ರಕರ್ತರನ್ನು ಭದ್ರತಾ ಪಡೆಗಳು ಥಳಿಸಿರುವ ಘಟನೆ ಬುಧವಾರ ನಡೆದಿದೆ. 
ಶ್ರೀನಗರ ಫತೇಹ್ ಕಡಲ್ ಪ್ರದೇಶದಲ್ಲಿ ಅಡಗಿ ಕುಳಿತಿದ್ದ ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸುತ್ತಿತ್ತು. 
ಈ ವೇಳೆ ಸ್ಥಳಕ್ಕೆ ತೆರಳಿರುವ ಕೆಲ ಸ್ಥಳೀಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪತ್ರಕರ್ತರಿಗೆ ಭದ್ರತಾ ಪಡೆಗಳು ಥಳಿಸಿದ್ದಾರೆಂದು ಹೇಳಲಾಗುತ್ತಿದೆ. ಘಟನೆ ಕಾಶ್ಮೀರ ನ್ಯಾಷನಲ್ ಟೆಲಿವಿಷನ್ ಜರ್ನಲಿಸ್ಟ್ ಅಸೋಸಿಯೇಷನ್ ಹಾಗೂ ಇತರೆ ಮಾಧ್ಯಮ ಸಂಸ್ಥೆಗಳು ತೀವ್ರ ಖಂಡನೆ ವ್ಯಕ್ತಪಡಿಸಿದೆ. 
ಎನ್'ಕೌಂಟರ್ ನಡೆದ ಸ್ಥಳಿಂದ ದೂರವಿದ್ದೇ ನಾವು ನಮ್ಮ ವೃತ್ತಿ ಕರ್ತವ್ಯವನ್ನು ನಿಭಾಯಿಸುತ್ತಿದ್ದೇವು. ಭದ್ರತಾಪಡೆಗಳಿಗೆ ಯಾವುದೇ ರೀತಿಯ ಸಮಸ್ಯೆಗಳನ್ನು ನೀಡಿರಲಿಲ್ಲ. ಆದರೂ ನಮ್ಮ ಮೇಲೆ ದಾಳಿ ನಡೆದಿದೆ ಎಂದು ಪತ್ರಕರ್ತರು ಆರೋಪಿಸಿದ್ದಾರೆ. 
ಎನ್'ಕೌಂಟರ್ ನಡೆದ ಸ್ಥಳದಲ್ಲಿ ನಡೆಯುತ್ತಿದ್ದ ಬೆಳವಣಿಗೆಗಳನ್ನು ವರದಿ ಮಾಡದಂತೆ ನಮ್ಮನ್ನು ತಡೆಯುವ ಸಲುವಾಗಿ ದಾಳಿ ನಡೆಸಲಾಯಿತು. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿಯೇ ನಮ್ಮನ್ನು ಥಳಿಸಲಾಗಿದೆ ಎಂದು ತಿಳಿಸಿದ್ದಾರೆ. 
ಘಟನೆಯಲ್ಲಿ ಗಾಯಗೊಂಡಿರುವ ಪತ್ರಕರ್ತರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!