#MeToo: ರಾಜೀನಾಮೆ ನೀಡಿದ ಕೇಂದ್ರ ಸಚಿವ ಎಂ ಜೆ ಅಕ್ಬರ್ 
ದೇಶ

#MeToo ಎಫೆಕ್ಟ್: ರಾಜೀನಾಮೆ ನೀಡಿದ ಕೇಂದ್ರ ಸಚಿವ ಎಂ ಜೆ ಅಕ್ಬರ್

#MeToo ಅಭಿಯಾನದಲ್ಲಿ ತಮ್ಮ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಂಜೆ ಅಕ್ಬರ್ ರಾಜೀನಾಮೆ ನೀಡಿದ್ದಾರೆ.

ನವದೆಹಲಿ: #MeToo ಅಭಿಯಾನದಲ್ಲಿ ತಮ್ಮ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಂಜೆ ಅಕ್ಬರ್ ರಾಜೀನಾಮೆ ನೀಡಿದ್ದಾರೆ. 
ತಮ್ಮ ವಿರುದ್ಧದ ಆರೋಪವನ್ನು ಕೇಂದ್ರ ವಿದೇಶಾಂಗ ರಾಜ್ಯ ಸಚಿವ ನಿರಾಕರಿಸಿದ್ದರು. ತಮ್ಮ ವಿರುದ್ಧ ಆರೋಪ ಮಾಡಿದ್ದವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನೂ ದಾಖಲಿಸಿದ್ದ ಎಂಜೆ ಅಕ್ಬರ್, ಅ.17 ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 
ಎಂಜೆ ಅಕ್ಬರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆಂಬ ವದಂತಿಗಳು ಭಾನುವಾರವೇ ಕೇಳಿಬಂದಿತ್ತಾದರೂ ಈ ವರೆಗೂ ರಾಜೀನಾಮೆ ನೀಡಿರಲಿಲ್ಲ. ಈಗ ಎಂಜೆ ಅಕ್ಬರ್ ಅವರ ರಾಜೀನಾಮೆಯನ್ನು  ಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ. ಕೆಲ ದಿನಗಳ ಹಿಂದಷ್ಟೇ ಮಹಿಳಾ ಪತ್ರಕರ್ತೆಯೊಬ್ಬರು ದಿ ಟೆಲಿಗ್ರಾಫ್ ಪತ್ರಿಕೆಯ ಸಂಪಾದಕರಾಗಿದ್ದ ಎಂ.ಜೆ.ಅಕ್ಬರ್ ಅವರು ತಮಗೆ ವೃತ್ತಿ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel