ದೇಶ

ಕ್ರಿಮಿನಲ್ ಹಿನ್ನೆಲೆ ಇಲ್ಲದಿದ್ದರೆ ಮಾತ್ರ ಕಾಶ್ಮೀರದ ವಿದ್ಯಾರ್ಥಿಗಳಿಗೆ ಪಂಜಾಬ್ ಕಾಲೇಜುಗಳಿಗೆ ಪ್ರವೇಶ!

Srinivas Rao BV
ಚಂಡೀಗಢ: ಕಾಶ್ಮೀರದ ವಿದ್ಯಾರ್ಥಿಗಳು ಪಂಜಾಬ್ ನಲ್ಲಿ ವ್ಯಾಸಂಗ ಮಾಡಬೇಕಾದರೆ ಕ್ರಿಮಿನಲ್ ಹಿನ್ನೆಲೆ ಇಲ್ಲದೇ ಇರುವ ಬಗ್ಗೆ ಪ್ರಮಾಣ ಪತ್ರ ಸಲ್ಲಿಸುವುದನ್ನು ಪಂಜಾಬ್ ಸರ್ಕಾರ ಕಡ್ಡಾಯಗೊಳಿಸಲು ತೀರ್ಮಾನಿಸಿದೆ. 
ಪಂಜಾಬ್ ಪೊಲೀಸರು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಈ ರೀತಿಯ ಸೂಚನೆಗಳನ್ನು ಪೊಲೀಸ್ ಇಲಾಖೆ ನೀಡಿದ್ದು ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳು ಪಂಜಾಬ್ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಬೇಕಿದ್ದರೆ ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಅಪರಾಧಗಳಿಲ್ಲ ಎಂಬುದನ್ನು ಸಾಬೀತುಪಡಿಸಲು ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. 
ಸ್ಥಳೀಯ ಪೊಲೀಸ್ ಅಧಿಕಾರಿಗಳು ದೃಢೀಕರಿಸಿದ ಪ್ರಮಾಣ ಪತ್ರ ನೀಡಿದರಷ್ಟೇ ಪಂಜಾಬ್ ನ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗಕ್ಕೆ ಅವಕಾಶ ನೀಡಲಾಗುತ್ತದೆ. ಜಮ್ಮು-ಕಾಶ್ಮೀರ ಪೊಲೀಸರು ನೀಡಿದ ಪ್ರಮಾಣಪತ್ರವನ್ನು ಪಂಜಾಬ್ ಪೊಲೀಸರು ದೃಢೀಕರಿಸಲಿದ್ದಾರೆ. ಈ ಬಳಿಕವಷ್ಟೇ ಕಾಲೇಜುಗಳಲ್ಲಿ ಪ್ರವೇಶ ನೀಡಲಾಗುತ್ತದೆ. 
SCROLL FOR NEXT