ನವದೆಹಲಿ: ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಕೇರಳ, ತಮಿಳುನಾಡು ಹಾಗೂ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.
ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸುಪ್ರೀಂಕೋರ್ಟ್ ಆದೇಶಕ್ಕೆ ಅಯ್ಯಪ್ಪ ಸ್ವಾಮಿ ಭಕ್ತಾಧಿಗಳು ಸೇರಿದಂತೆ ಹಿಂದೂಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೆ. ಮಹಿಳಾ ಪರ , ಎಡರಂಗ ಮತ್ತಿತರ ಸಂಘಟನೆಗಳು ನ್ಯಾಯಾಲಯದ ತೀರ್ಪು ಜಾರಿಗೆ ಒತ್ತಾಯಿಸುತ್ತಿವೆ.
ನೆರೆಯ ತಮಿಳುನಾಡು ಹಾಗೂ ಕರ್ನಾಟಕದಲ್ಲಿಯೂ ಪ್ರತಿಭಟನೆ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಬೇಕು, ಸಾಮಾಜಿಕ ಜಾಲತಾಣದಲ್ಲಿಯೂ ಈ ಬಗ್ಗೆ ಯಾವುದೇ ವದಂತಿಗಳು ಹಬ್ಬದಂತೆ ಕ್ರಮ ಕೈಗೊಳ್ಳಬೇಕು ಎಂದು ಮೂರು ರಾಜ್ಯಗಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ಕೇಂದ್ರ ಗೃಹ ಸಚಿವಾಲಯದ ಅಧೀನ ಕಾರ್ಯದರ್ಶಿ ಅರವಿಂದ್ ನಾಥ್ ಜಾ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics