ರಾಷ್ಟ್ರಪತಿ ರಾಮನಾಥ್ ಕೋವಿಂದ್ 
ದೇಶ

ಎಲ್ಲೆಡೆ ದಸರಾ ಸಂಭ್ರಮ: ನಾಡ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ ರಾಷ್ಟ್ರಪತಿ ಕೋವಿಂದ್

ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ...

ನವದೆಹಲಿ: ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 
ಕನ್ನಡ ನಾಡಿನ ಜನತೆಗೆ ಕನ್ನಡದಲ್ಲಿಯೇ ಟ್ವೀಟ್ ಮಾಡುವ ಮೂಲಕ ಕೋವಿಂದ್ ಅವರು ವಿಜಯದಶಮಿ ಹಾಗೂ ನವರಾತ್ರಿಯ ಶುಭಾಶಯಗಳನ್ನು ಕೋರಿದ್ದಾರೆ. 
ವಿಜಯದಶಮಿ ಹಾಗೂ ದುರ್ಗಾಪೂಜೆಯ ಶುಭ ಸಂದರ್ಭದಲ್ಲಿ ದೇಶದ ಸಹ ನಾಗರೀಕರೆಲ್ಲ್ರಿಗೂ ದಸರಾ ಹಬ್ಬದ ಶುಭಾಶಯಗಳು. ದಸರಾ ಹಬ್ಬವು ಸಮಾಜದಲ್ಲಿನ ದುಷ್ಟಶಕ್ತಿಗಳ ಮೇಲೆ ಶಿಷ್ಟಶಕ್ತಿಗಳ ಗೆಲವಿನ ವಿಜಯೋತ್ಸವವಾಗಿದೆ. ದಸರಾ ಮಹೋತ್ಸವವು ನಮ್ಮೆಲ್ಲರ ಕುಟುಂಬದ ಸದಸ್ಯರೆಲ್ಲರಿಗೂ ಹಾಗೂ ನಮ್ಮ ಸಮಾಜದ ಎಲ್ಲಾ ವರ್ಗಗಳ ಸದಸ್ಯರಿಗೂ ಶುಭವನ್ನುಂಟು ಮಾಡಲಿ ಎಂದು ಹೇಳಿದ್ದಾರೆ.
ರಾಷ್ಟ್ರಪತಿಗಳು ಕನ್ನಡವಷ್ಟೇ ಅಲ್ಲದೆ, ಹಿಂದಿ ಹಾಗೂ ಇಂಗ್ಲೀಷ್, ತಮಿಳು, ಮಲೆಯಾಳಂ, ತೆಲುಗು ಸೇರಿ ಹಲವು  ಭಾಷೆಗಳಲ್ಲೂ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ರಾಷ್ಟ್ರಪತಿಗಳು ಕನ್ನಡದಲ್ಲಿಯೇ ಟ್ವೀಟ್ ಮಾಡಿ ಶುಭಾಶಯಗಳನ್ನು ಕೋರಿರುವ ಹಿನ್ನಲೆಯಲ್ಲಿ ಹಲವು ಕನ್ನಡಾಭಿಮಾನಿಗಳು ಹರ್ಷ ವ್ಯಕ್ತಪಡಿಸಿ, ಧನ್ಯವಾದಗಳನ್ನು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT