ದೇಶ

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ದಕ್ಷಿಣ ಕಾಶ್ಮೀರದಲ್ಲಿ ಬಿಜೆಪಿ ಭರ್ಜರಿ ಗೆಲುವು

Lingaraj Badiger
ಶ್ರೀನಗರ: ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ದಕ್ಷಿಣ ಕಾಶ್ಮೀರದ ಭಯೋತ್ಪಾದನೆ ಪೀಡಿತ ನಾಲ್ಕು ಜಿಲ್ಲೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.
ಈ ತಿಂಗಳ ಆರಂಭದಲ್ಲಿ ನಾಲ್ಕು ಹಂತಗಳಲ್ಲಿ ನಡೆದ ಸ್ಥಳೀಯಸಂಸ್ಥೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು. ದಕ್ಷಿಣ ಕಾಶ್ಮೀರದ ನಾಲ್ಕು ಜಿಲ್ಲೆಗಳ 132 ಸ್ಥಾನಗಳ ಪೈಕಿ ಬಿಜೆಪಿ 53 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಅನಂತ್ ನಾಗ್, ಕುಲ್ಗಮ್, ಪುಲ್ವಾಮ ಹಾಗೂ ಶೋಪಿಯಾನ್ ಜಿಲ್ಲೆಗಳಲ್ಲಿ ಬಿಜೆಪಿ ಅನಿರೀಕ್ಷಿತ ಗೆಲುವು ಸಾಧಿಸುವ ಮೂಲಕ ಕನಿಷ್ಠ 20 ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯಲಿದೆ.
ಇದುವರೆಗೆ ದಕ್ಷಿಣ ಕಾಶ್ಮೀರದ 94 ವಾರ್ಡ್ ಗಳ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಕೇವಲ 28 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. 
ಶೋಪಿಯಾನ್ ಜಿಲ್ಲೆಯ 12 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು ಜಿಲ್ಲೆಯ ಐದು ವಾರ್ಡ್ ಗಳಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.
SCROLL FOR NEXT