ದೇಶ

ಭಾರತ ಎಸ್-400 ಕ್ಷಿಪಣಿ ವ್ಯವಸ್ಥೆ ಖರೀದಿಸುತ್ತಿರುವುದಕ್ಕೆ ಪಾಕಿಸ್ತಾನಕ್ಕೆ ಶುರುವಾಗಿದೆ ನಡುಕ

Srinivas Rao BV
ಭಾರತ ರಷ್ಯಾದಿಂದ ಎಸ್-400 ಕ್ಷಿಪಣಿ ವ್ಯವಸ್ಥೆ ಖರೀದಿಸುತ್ತಿರುವುದಕ್ಕೆ ಪಾಕಿಸ್ತಾನಕ್ಕೆ ನಡುಕ ಪ್ರಾರಂಭವಾದಂತಿದೆ.  
ನೆರೆ ರಾಷ್ಟ್ರ ಎಸ್-400 ಕ್ಷಿಪಣಿ ವ್ಯವಸ್ಥೆ ಖರೀದಿಸುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ ವಿದೇಶಾಂಗ ಇಲಾಖೆ, ಆತಂಕ ವ್ಯಕ್ತಪಡಿಸಿದ್ದು, ಭಾರತ ಎಸ್-400 ಕ್ಷಿಪಣಿ ವ್ಯವಸ್ಥೆ ಖರೀದಿಸುತ್ತಿರುವುದು ಬ್ಯಾಲಿಸ್ಟಿಕ್ ಮಿಸೈಲ್ ಡಿಫೆನ್ಸ್ (ಬಿಎಂಡಿ) ಯನ್ನು ವಿವಿಧ ಮೂಲಗಳಿಂದ ಹೊಂದುವುದರ ಭಾಗವಾಗಿದೆ. ಇದು ಏಷ್ಯಾದ ಸ್ಥಿರತೆಯಲ್ಲಿ ಏರು ಪೇರು ಮಾಡಲಿದೆ. ಮುಂದಿನ ದಿನಗಳಲ್ಲಿ ಶಸ್ತ್ರಾಸ್ತ್ರಗಳ ಪೈಪೋಟಿಗೆ ಕಾರಣವಾಗಲಿದೆ ಎಂದು ಪಾಕಿಸ್ತಾನ ಹೇಳಿದೆ. 
ಇತ್ತೀಚೆಗೆ ವ್ಲಾದಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದಾಗ, ಭಾರತ ಎಸ್-400 ಕ್ಷಿಪಣಿ ವ್ಯವಸ್ಥೆ ಖರೀದಿಸುವ ಒಪ್ಪಂದಕ್ಕೆ ಭಾರತ-ರಷ್ಯಾ ಸರ್ಕಾರ ಸಹಿ ಹಾಕಿದ್ದವು.
SCROLL FOR NEXT