ಕೋತಿಗಳ ಕೆಲಸಕ್ಕೆ ವ್ಯಕ್ತಿಯ ಸಾವು: ಕೋತಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಕುಟುಂಬ ಸದಸ್ಯರ ಆಗ್ರಹ 
ದೇಶ

ಕೋತಿಗಳ ಕೆಲಸಕ್ಕೆ ವ್ಯಕ್ತಿಯ ಸಾವು: ಕೋತಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಕುಟುಂಬ ಸದಸ್ಯರ ಆಗ್ರಹ

ಕೋತಿಗಳು ಮಾಡಿದ ಕೆಲಸದಿಂದ ವ್ಯಕ್ತಿ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದು, ಕುಟುಂಬ ಸದಸ್ಯರು ಕೋತಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.

ಬಾಘ್ಪಾಟ್: ಕೋತಿಗಳು ಮಾಡಿದ ಕೆಲಸದಿಂದ ವ್ಯಕ್ತಿ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದು, ಕುಟುಂಬ ಸದಸ್ಯರು ಕೋತಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.
ಉತ್ತರ ಪ್ರದೇಶದ ಬಾಘ್ಪಾಟ್ ನಲ್ಲಿ ಈ ಘಟನೆ ನಡೆದಿದ್ದು ವ್ಯಕ್ತಿಯೋರ್ವ ಇಟ್ಟಿಗೆ ರಾಶಿಯ ಬಳಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಕೆಲವು ಕೋತಿಗಳು ಇಟ್ಟಿಗೆ ರಾಶಿಯ ಮೇಲೆ ಬಂದು ಜಿಗಿದಿವೆ. ಇಟ್ಟಿಗೆ ರಾಶಿ ಕುಸಿದು ವ್ಯಕ್ತಿಯ ಮೇಲೆ ಬಿದ್ದು ಆತ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
ಕೋತಿಗಳ ಕೆಲಸಕ್ಕೆ ಅವುಗಳ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಕುಟುಂಬ ಸದಸ್ಯರು ಆಗ್ರಹಿಸಿದ್ದಾರೆ. ಆದರೆ ಕುಟುಂಬ ಸದಸ್ಯರಲ್ಲಿ ಒಬ್ಬೊಬ್ಬರು ಒಂದೊಂದು ರೀತಿಯ ಮಾಹಿತಿ ನೀಡುತ್ತಿದ್ದು, ಮೃತರ ಸಹೋದರನ ಪ್ರಕಾರ ತನ್ನ ಸಹೋದರ ಹೋಮ-ಹವನಕ್ಕಾಗಿ ಕಟ್ಟಿಗೆ ತರಲು ಹೋಗಿದ್ದರು. ಈ ವೇಳೆ ಕೋತಿಗಳು ಆತನ ಮೇಲೆ ಕಲ್ಲು ತೂರಾಟ ಮಾಡಿ ದಾಳಿ ಮಾಡಿವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT