ಜಮ್ಮು-ಕಾಶ್ಮೀರ :ಕುಲ್ಗಾಮ್ ನಲ್ಲಿ ಎನ್ ಕೌಂಟರ್ ಪ್ರಗತಿಯಲ್ಲಿ
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಲಾರೊ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ಪ್ರಗತಿಯಲ್ಲಿದೆ.
ಕುಲ್ಗಾಮ್ : ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಲಾರೊ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ಪ್ರಗತಿಯಲ್ಲಿದೆ.
ಒಂದೆರಡು ಉಗ್ರರು ಮನೆಯೊಂದರಲ್ಲಿ ಅಡಗಿ ಕುಳಿತಿರುವ ಶಂಕೆ ಇದ್ದು, ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ.
ಉತ್ತರ ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ಕ್ರಲ್ಹಾರ್ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಎರಡು ದಿನಗಳ ನಂತರ ಮತ್ತೆ ಭದ್ರತಾ ಪಡೆಗಳು ಇಂದು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿವೆ.
ಅಂದಿನ ಕಾರ್ಯಾಚರಣೆ ವೇಳೆಯಲ್ಲಿ ಎರಡು ಎಕೆ -47, ಮೂರು ಗ್ರೇನೆಡ್ಸ್ , ಎರಡು ಚೈನಾದ ಪಿಸ್ತೂಲ್ ಮತ್ತಿತರ ಶಸಾಸ್ತ್ರಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.