ಸಾಂದರ್ಭಿಕ ಚಿತ್ರ 
ದೇಶ

ಸಿಬಿಐ ವಿಶೇಷ ನಿರ್ದೇಶಕರ ಭ್ರಷ್ಟಾಚಾರ ಪ್ರಕರಣ: ಸಿಬಿಐ ಡೆಪ್ಯೂಟಿ ಎಸ್ ಪಿ ಬಂಧನ

ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಆಸ್ಥಾನಾ ಭಾಗಿಯಾಗಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ....

ನವದೆಹಲಿ: ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಆಸ್ಥಾನಾ ಭಾಗಿಯಾಗಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಉಪ ಪೊಲೀಸ್ ಅಧೀಕ್ಷಕ ದೇವೇಂದರ್ ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ವಿವಾದಾತ್ಮಕ ಮಾಂಸ ರಫ್ತುದಾರ ಮೊಯಿನ್‌ ಖುರೇಷಿ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ದೇವೇಂದರ್ ಕುಮಾರ್ ಅವರನ್ನು, ಪ್ರಕರಣದ ಮತ್ತೊಬ್ಬ ಆರೋಪಿ ಸತೀಶ್ ಸನಾಗೆ ಕ್ಲೀನ್ ಚಿಟ್ ನೀಡಲು ಲಂಚ ಪಡೆದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಸ್ಥಾನಾ ನೇತೃತ್ವದ ಸಿಬಿಐ ತಂಡ ಸೆಪ್ಟೆಂಬರ್ 26, 2018ರಂದು ಸತೀಶ್ ಸನಾಗೆ ಕ್ಲೀನ್ ಚಿಟ್ ನೀಡಲು ಆರೋಪಿಯಿಂದ ನಕಲಿ ಹೇಳಿಕೆ ಪಡೆದಿದ್ದಾರೆ. ಆದರೆ ಆ ದಿನ ಆರೋಪಿ ಉದ್ಯಮಿ ಹೈದರಾಬಾದ್ ನಲ್ಲಿದ್ದರು ಎಂಬುದು ಸಿಬಿಐ ತನಿಖೆ ವೇಳೆ ಬಹಿರಂಗವಾಗಿದೆ.
ದೇವೇಂದರ್ ಕುಮಾರ್ ಹಾಗೂ ಸಿಬಿಐ ನಿರ್ದಶಕ ಅಲೋಕ್ ವರ್ಮಾ ನಂತರ ನಿರ್ದೇಶಕ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿರುವ ಆಸ್ಥಾನಾ ವಿರುದ್ಧ ಮೊಯಿನ್‌ ಖುರೇಷಿ ಪ್ರಕರಣದಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಪ್ರಕರಣದಲ್ಲಿ ತಮ್ಮ ಹೆಸರು ಕೈ ಬಿಡಲು ಆಸ್ಥಾನಾ ಎರಡು ಕೋಟಿ ರು. ಲಂಚ ಪಡೆದಿದ್ದರು ಎಂದು ಹೈದರಾಬಾದ್‌ನ ಉದ್ಯಮಿ ಸತೀಶ್‌ ಸಿಬಿಐ ವಿಚಾರಣೆ ವೇಳೆ ಹೇಳಿಕೆ ನೀಡಿದ್ದರು.
ಡಿಸೆಂಬರ್‌ 2017ರಿಂದ ಹತ್ತು ತಿಂಗಳ ಅವಧಿಯಲ್ಲಿ ದುಬೈ ಮೂಲದ ಉದ್ಯಮಿ ಮನೋಜ್‌ ಪ್ರಸಾದ್‌ ಮೂಲಕ ಕಂತುಗಳಲ್ಲಿ ಹಣ ನೀಡಿರುವುದಾಗಿ ಸನಾ ಆರೋಪಿಸಿದ್ದಾರೆ. ಈ ಸಂಬಂಧ ಸಿಬಿಐಗೆ ದೂರನ್ನೂ ನೀಡಿದ್ದರು. 
ಪ್ರಸಾದ್‌ ಅವರನ್ನು ಕೆಲದಿನಗಳ ಹಿಂದೆ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಬಳಿಕ ಆಸ್ಥಾನಾ ವಿರುದ್ಧ ಎಫ್‌ಐರ್‌ ದಾಖಲಿಸಲಾಗಿದೆ
ದೆಹಲಿಯಲ್ಲಿ ಮಾಂಸ ರಫ್ತು ವಹಿವಾಟು ನಡೆಸುವ ಖುರೇಷಿ ದುಬೈ, ಲಂಡನ್‌ ಮತ್ತು ಯುರೋಪ್‌ಗಳಿಗೆ 2000 ಕೋಟಿ ರುಪಾಯಿಗೂ ಅಧಿಕ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್