ಸಂಗ್ರಹ ಚಿತ್ರ 
ದೇಶ

ಸ್ಯಾಂಡಲ್ ವುಡ್ ನಲ್ಲಿ #MeToo ಅಲ್ಲೋಲ-ಕಲ್ಲೋಲ, ಸಂಧಾನಕ್ಕೆ ಮುಂದಾದ ಚಿತ್ರರಂಗ

ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಮಾಡಿರುವ #MeToo ಆರೋಪಗಳು ಕನ್ನಡ ಚಿತ್ರರಂಗದಲ್ಲಿ ಭಾರಿ ಸಂಚಲನ ಸೃಷ್ಟಿ ಮಾಡಿದ್ದು, ಇದೀಗ ಚಿತ್ರರಂಗದ ಗಣ್ಯರು ಈ ವಿವಾದಕ್ಕೆ ತೆರೆ ಎಳೆಯಲು ಹರಸಾಹಸ ಪಡುತ್ತಿದ್ದಾರೆ.

ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಮಾಡಿರುವ #MeToo ಆರೋಪಗಳು ಕನ್ನಡ ಚಿತ್ರರಂಗದಲ್ಲಿ ಭಾರಿ ಸಂಚಲನ ಸೃಷ್ಟಿ ಮಾಡಿದ್ದು, ಇದೀಗ ಚಿತ್ರರಂಗದ ಗಣ್ಯರು ಈ ವಿವಾದಕ್ಕೆ ತೆರೆ ಎಳೆಯಲು ಹರಸಾಹಸ ಪಡುತ್ತಿದ್ದಾರೆ.
ಈಗಾಗಲೇ ಮೀಟೂ ಸಂಬಂಧ ಅರ್ಜುನ್ ಸರ್ಜಾ ಮಾವ ನಟ ರಾಜೇಶ್ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದು, ಈ ಸಂಬಂಧ ವಿಚಾರಣೆ ಪ್ರಗತಿಯಲ್ಲಿದೆ. ಇದಕ್ಕೆ ಸಂಬಂಧಿಸಿದಂತೆ ವಾಣಿಜ್ಯ ಮಂಡಳಿ ನಟಿ ಶೃತಿ ಹರಿಹರನ್ ಗೆ ಸಾಕ್ಷ್ಯ ನೀಡುವಂತೆ ಕೇಳಿದ್ದು, ಅದಕ್ಕೂ ಮೊದಲೇ ವಿವಾದವನ್ನು ಇತ್ಯರ್ಥಗೊಳಿಸಲು ತೆರೆ ಹಿಂದೆ ಸಾಕಷ್ಟು ಪ್ರಯತ್ನಗಳು ನಡೆಯಲಾರಂಭಿಸಿವೆ.
ಇನ್ನು ನಟಿ ಶೃತಿಹರಿಹರನ್ ಮತ್ತು ನಟ ಅರ್ಜುನ್ ಸರ್ಜಾ ನಡುವೆ ಸಂಧಾನಕ್ಕಾಗಿ ಚಿತ್ರರಂಗದ ಗಣ್ಯರು ಮುಂದಾಗಿದ್ದು, ವಾಣಿಜ್ಯ ಮಂಡಳಿಯ ಈ ಹಿಂದಿನ ಅಧ್ಯಕ್ಷ ಸಾರಾಗೋವಿಂದು, ಹಾಲಿ ಅಧ್ಯಕ್ಷ ಚಿನ್ನೇಗೌಡ ಹಾಗೂ ನಟ ಅಂಬರೀಶ್ ನೇತೃತ್ವದಲ್ಲಿ ಸಂಧಾನ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬುಧವಾರ ನಟ ಅಂಬರೀಶ್ ನೇತೃತ್ವದಲ್ಲಿ ಸಂಧಾನ ಸಭೆ ನಡೆಯಲಿದ್ದು, ಈ ವೇಳೆ ನಟಿ ಶೃತಿಹರಿಹರನ್ ಮತ್ತು ನಟ ಅರ್ಜುನ್ ಸರ್ಜಾರೊಂದಿಗೆ ಅಂಬರೀಶ್ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್