ದೇಶ

ಮಿ ಟೂ ಚಳವಳಿ: ಪಿಐಎಲ್ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

Sumana Upadhyaya

ನವದೆಹಲಿ:  ಮಿ ಟೂ ಚಳವಳಿಯಡಿ ಸೆಲೆಬ್ರಿಟಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಪುರುಷರ ವಿರುದ್ಧ ಮಾಡುತ್ತಿರುವ ಲೈಂಗಿಕ ಕಿರುಕುಳ ಆರೋಪವನ್ನು ಆಧಾರವಾಗಿಟ್ಟುಕೊಂಡು ಎಫ್ಐಆರ್ ದಾಖಲಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ(ಪಿಐಎಲ್) ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಾಧೀಶರಾದ ಎಸ್ ಕೆ ಕೌಲ್ ನೇತೃತ್ವದ ನ್ಯಾಯಪೀಠ, ನಿಗದಿತ ಅವಧಿಯಲ್ಲಿಯೇ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ. ಮಹಿಳೆಯರ ಆರೋಪದ ಪರವಾಗಿ ನ್ಯಾಯಮೂರ್ತಿ ಎಂ ಎಲ್ ಶರ್ಮ ನ್ಯಾಯಾಲಯದಲ್ಲಿ ಪಿಐಎಲ್ ಹಾಕಿದ್ದರು.

ಮಹಿಳೆಯರು ಮಾಡುವ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ಮಾತ್ರವಲ್ಲದೆ, ತಮಗಾದ ಅನುಭವದ ಬಗ್ಗೆ ಬಹಿರಂಗವಾಗಿ ಹೇಳಿಕೊಳ್ಳುತ್ತಿರುವ ಮಹಿಳೆಯರಿಗೆ ಭದ್ರತೆ ಮತ್ತು ನೆರವು ನೀಡಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಆದೇಶ ನೀಡುವಂತೆ ಕೂಡ ಅರ್ಜಿದಾರರು ಒತ್ತಾಯಿಸಿದ್ದಾರೆ.

SCROLL FOR NEXT