ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ(ಸಂಗ್ರಹ ಚಿತ್ರ) 
ದೇಶ

2019 ಚುನಾವಣೆಗೆ ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸುವುದಿಲ್ಲ: ಚಿದಂಬರಂ

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಪಕ್ಷದ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವುದಿಲ್ಲ ಎಂದು ಮಾಜಿ ಹಣಕಾಸು ಸಚಿವ...

ಚೆನ್ನೈ: 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಪಕ್ಷದ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವುದಿಲ್ಲ ಎಂದು ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕರೂ ಆಗಿರುವ ಪಿ ಚಿದಂಬರಂ ಹೇಳಿದ್ದಾರೆ.

ರಾಹುಲ್ ಗಾಂಧಿ ಸೇರಿದಂತೆ ಬೇರೆ ಯಾರನ್ನು ಕೂಡ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ಪಕ್ಷದಿಂದ ಬಿಂಬಿಸುವುದಿಲ್ಲ ಎಂದು ತಮಿಳಿನ ನ್ಯೂಸ್ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಚಿದಂಬರಂ ಹೇಳಿದ್ದಾರೆ.

ಮುಂದಿನ ವರ್ಷ ಏಪ್ರಿಲ್ ನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇದಕ್ಕೆ ಮಿಶ್ರ ಹಾಗೂ ಋಣಾತ್ಮಕ ಪ್ರತಿಕ್ರಿಯೆ ಹಲವು ಸಮಾನ ಮನಸ್ಕ ಮೈತ್ರಿ ಪಕ್ಷಗಳಿಂದ ನಮಗೆ ಬಂದಿವೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ನಾವೆಂದೂ ಹೇಳಿಕೊಂಡಿಲ್ಲ. ಕೆಲವು ಕಾಂಗ್ರೆಸ್ ನಾಯಕರು ಈ ಬಗ್ಗೆ ಮಾತನಾಡುವಾಗ ಎಐಸಿಸಿ ಮಧ್ಯೆ ಪ್ರವೇಶಿಸಿ ಅಂತಹ ಹೇಳಿಕೆ ನೀಡುವುದು ನಿಲ್ಲಿಸುವಂತೆ ಸೂಚಿಸಿತ್ತು. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು, ಅದನ್ನು ಅಧಿಕಾರದಿಂದ ಹೊರಗಿಡುವುದು ನಮ್ಮ ಬಯಕೆಯಾಗಿದೆ. ಎನ್ ಡಿಎ ಜಾಗದಲ್ಲಿ ಜನಪರವಾದ, ವ್ಯಕ್ತಿಗಳಿಗೆ ಸ್ವಾತಂತ್ರ್ಯ ನೀಡುವ, ಪ್ರಗತಿಪರ ಸರ್ಕಾರವನ್ನು ನೋಡುವುದು ನಮ್ಮ ಆಸೆಯಾಗಿದೆ. ತೆರಿಗೆ ಭಯೋತ್ಪಾದನೆಯಂತಹ ವಾತಾವರಣವನ್ನು ಸೃಷ್ಟಿಸುವ ಸರ್ಕಾರ ನಮಗೆ ಬೇಡ. ಮಹಿಳೆಯರು, ಮಕ್ಕಳಿಗೆ ರಕ್ಷಣೆ ನೀಡುವ ರೈತರನ್ನು ಬೆಳೆಸುವ ಸರ್ಕಾರ ಬೇಕು ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಜೊತೆ ಸ್ಥಳೀಯ ಪಕ್ಷಗಳು ಮೈತ್ರಿ ಮಾಡಿಕೊಳ್ಳದಂತೆ ನರೇಂದ್ರ ಮೋದಿ ಸರ್ಕಾರ ಬೆದರಿಕೆ ತಂತ್ರಗಳನ್ನು ಅಳವಡಿಸಿಕೊಳ್ಳುತ್ತಿದೆ ಎಂದು ಇದೇ ಸಂದರ್ಭದಲ್ಲಿ  ಆಪಾದಿಸಿದ್ದಾರೆ. ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಬಯಸುತ್ತಿದೆ. ಮೈತ್ರಿ ಮಾಡಿಕೊಂಡು ಚುನಾವಣೆ ನಂತರ ಪ್ರಧಾನ ಮಂತ್ರಿ ಯಾರಾಗಬೇಕು ಎಂದು ಎಲ್ಲಾ ಪಕ್ಷಗಳು ಒಟ್ಟಾಗಿ ಕುಳಿತು ಚರ್ಚೆ ಮಾಡಿ ನಿರ್ಧರಿಸಲಿದೆ ಎಂದರು.

ಕಳೆದ 20 ವರ್ಷಗಳಲ್ಲಿ ದೇಶದ ರಾಜಕೀಯ ವ್ಯವಸ್ಥೆಯಲ್ಲಿ ರಾಷ್ಟ್ರ ಮಟ್ಟದ ಪಕ್ಷಗಳ ಮತಗಳು ಸ್ಥಳೀಯ ಪಕ್ಷಗಳ ಜೊತೆ ಹರಿದು ಹಂಚಿ ಹೋಗುತ್ತಿವೆ. ಕಾಂಗ್ರೆಸ್ ಮತ್ತು ಬಿಜೆಪಿಯ ಒಟ್ಟಾರೆ ಮತಗಳು ಅರ್ಧಕ್ಕಿಂತಲೂ ಕಡಿಮೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ತಿಂಗಳ ಆರಂಭದಲ್ಲಿ ದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನ ನಾಯಕತ್ವ ಶೃಂಗಸಭೆಯಲ್ಲಿ ಮೈತ್ರಿ ಪಕ್ಷಗಳು ಬಯಸಿದರೆ ತಾವು ಪ್ರಧಾನಿಯಾಗಲು ಸಿದ್ದ ಎಂದು ರಾಹುಲ್ ಗಾಂಧಿ ಹೇಳಿದ್ದರು. ಇದು ಎರಡು ಹಂತದ ಪ್ರಕ್ರಿಯೆಯಾಗಿದ್ದು ಮೊದಲು ಒಟ್ಟಾಗಿ ಚುನಾವಣೆಯನ್ನು ಎದುರಿಸಿ ಗೆಲ್ಲುವುದು ಮತ್ತು ನಂತರ ಪ್ರಧಾನ ಮಂತ್ರಿ ಯಾರಾಗಬೇಕು ಎಂಬುದನ್ನು ನಿರ್ಧರಿಸುವುದಾಗಿದೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT