ಯೋಗಿ ಆದಿತ್ಯನಾಥ್ - ರಮಣ್ ಸಿಂಗ್ 
ದೇಶ

ವಿಡಿಯೋ: 46 ವರ್ಷದ ಯೋಗಿ ಕಾಲಿಗೆ ಬಿದ್ದ 66 ವರ್ಷದ ಛತ್ತೀಸ್ ಗಢ ಸಿಎಂ

ಛತ್ತೀಸ್ ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ಸೋಮವಾರ ವಿಧಾನಸಭಾ ಚುನಾವಣೆಗೆ ತಮ್ಮ ನಾಮಪತ್ರ ಸಲ್ಲಿಸುವ ...

ರಾಜನಂದಗಾಂವ್: ಛತ್ತೀಸ್ ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ಸೋಮವಾರ ವಿಧಾನಸಭಾ ಚುನಾವಣೆಗೆ ತಮ್ಮ ನಾಮಪತ್ರ ಸಲ್ಲಿಸುವ ಮುನ್ನ ವಯಸ್ಸಿನಲ್ಲಿ ತಮಗಿಂತ 20 ವರ್ಷ ಕಿರಿಯರಾದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದು, ಅದರ ವಿಡಿಯೋ ಈಗ ವೈರಲ್ ಆಗಿದೆ.
66 ವರ್ಷದ ರಮಣ್​ ಸಿಂಗ್ ಅವರು 46 ವರ್ಷದ ಯೋಗಿ ಆದಿತ್ಯನಾಥ್​ ಅವರ ಪಾದಕ್ಕೆ ಎರಗಿರುವುದು ಈಗ ತೀವ್ರ ಚರ್ಚೆಗೆ ಕಾರಣವಾಗಿದೆ.
ಮೂರು ಬಾರಿ ಸಿಎಂ ಆಗಿರುವ ರಮಣ್​ ಸಿಂಗ್​ ಅವರು ರಾಜಕೀಯ ಅನುಭವದಲ್ಲೂ ಹಿರಿಯರು. 1970ರ ಆರಂಭದಲ್ಲಿ ರಮಣ್ ಸಿಂಗ್ ಜನಸಂಘಕ್ಕೆ ಸೇರಿದವರು, 1976-77ರಲ್ಲಿ ಜನಸಂಘದ ಯುವ ಘಟಕಕ್ಕೆ ಅಧ್ಯಕ್ಷರಾಗಿದ್ದರು. ಇನ್ನು ಯೋಗಿ ಆದಿತ್ಯನಾಥ್ 1972ರಲ್ಲಿ ಜನಿಸಿದವರು. ಆದರೆ ಅವರು ಗೋರಖ್​ಪುರ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ ಸನ್ಯಾಸಿಯಾಗಿದ್ದಾರೆ.  ಸನ್ಯಾಸಿಯಾಗಿರುವ ಯೋಗಿ ಆದಿತ್ಯನಾಥರ ಪಾದಕ್ಕೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಸಹ ತಾವು ಪ್ರಮಾಣವಚನ ಸಮಾರಂಭದ ವೇಳೆ ನಮಸ್ಕರಿಸಿದ್ದರು ಎಂಬ ಮಾತುಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT