ಬಸ್- ಲಾರಿ ಮುಖಾಮುಖಿ ಡಿಕ್ಕಿ : ಒಬ್ಬ ವಿದ್ಯಾರ್ಥಿ ಸಾವು, 20 ಮಂದಿಗೆ ಗಾಯ
ಬಿಹಾರದ ಔರಂಗಬಾದ್ ಜಿಲ್ಲೆಯಲ್ಲಿ ಕಳೆದ ಮಧ್ಯರಾತ್ರಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಶಾಲಾ ಬಾಲಕನೊಬ್ಬ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಔರಂಗಬಾದ್ : ಬಿಹಾರದ ಔರಂಗಬಾದ್ ಜಿಲ್ಲೆಯಲ್ಲಿ ಕಳೆದ ಮಧ್ಯರಾತ್ರಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಶಾಲಾ ಬಾಲಕನೊಬ್ಬ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿ ಶಾಲಾ ಪ್ರವಾಸ ಮುಗಿಸಿ ರಾಜ್ ಗಿರ್ ನಿಂದ ಮನೆಗೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ . ಗಾಯಾಗಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವಿಷಯ ಕುರಿತಂತೆ ಮಾತನಾಡಿದ ಔರಂಗಬಾದ್ ಉಪ ವಿಭಾಗೀಯ ಅಧಿಕಾರಿ ಪ್ರದೀಪ್ ಕುಮಾರ್, ಅಪಘಾತದಲ್ಲಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಪರಿಸ್ಥಿತಿ ಗಂಭೀರವಾಗಿರುವವರನ್ನು ಬೇರೆಡೆಗೆ ಸಾಗಿಸಲಾಗಿದೆ. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ ಎಂದು ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.