ಸಂಗ್ರಹ ಚಿತ್ರ 
ದೇಶ

ಶಬರಿಮಲೆ ಮಹಿಳೆಯರ ಪ್ರವೇಶ: ನ.13ಕ್ಕೆ ಮರುಪರಿಶೀಲನೆ ಅರ್ಜಿ ವಿಚಾರಣೆ

10-50 ವರ್ಷದೊಳಗಿನ ಮಹಿಳೆಯರು ಜಗತ್ಪ್ರಸಿದ್ಧ ಅಯ್ಯಪ್ಪನ ದೇಗುಲ ಪ್ರವೇಶಿಸಲು ಅನುಮತಿ ನೀಡಿದ್ದ ಸುಪ್ರೀಂಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರು ಪರಿಶೀಲನಾ ಅರ್ಜಿ ವಿಚಾರಣೆಯನ್ನು ನ.13ರಂದು ನಡೆಸುವುದಾಗಿ ಸುಪ್ರೀಂಕೋರ್ಟ್ ಮಂಗಳವಾರ ತಿಳಿಸಿದೆ...

ನವದೆಹಲಿ: 10-50 ವರ್ಷದೊಳಗಿನ ಮಹಿಳೆಯರು ಜಗತ್ಪ್ರಸಿದ್ಧ ಅಯ್ಯಪ್ಪನ ದೇಗುಲ ಪ್ರವೇಶಿಸಲು ಅನುಮತಿ ನೀಡಿದ್ದ ಸುಪ್ರೀಂಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರು ಪರಿಶೀಲನಾ ಅರ್ಜಿ ವಿಚಾರಣೆಯನ್ನು ನ.13ರಂದು ನಡೆಸುವುದಾಗಿ ಸುಪ್ರೀಂಕೋರ್ಟ್ ಮಂಗಳವಾರ ತಿಳಿಸಿದೆ. 
ಶತ ಶತಮಾನಗಳಿಂದ ಆಚರಿಸಿಕೊಂಡು ಬಂದಿದ್ದ ಪದ್ಧತಿಯನ್ನು ಮುರಿಯುತ್ತಿರುವುದು ಸರಿಯಲ್ಲ ಎಂದು ಹೇಳುತ್ತಿರುವ ಅಯ್ಯಪ್ಪ ದೇಗುಲದ ಪೂಜಾರಿಗಳು ಹಾಗೂ ಭಕ್ತರು ಹಲವು ದಿನಗಳಿಂದು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಪ್ರತಿಭಟನೆಯ ನಡುವೆಯೂ ಹಲವು ಮಹಿಳೆಯರು ಅಯ್ಯಪ್ಪನ ದೇಗುಲ ಪ್ರವೇಶ ಮಾಡಲು ಮುಂದಾಗಿ ವಿಫಲಗೊಂಡಿದ್ದಾರೆ. 
ಸಂಪ್ರದಾಯದ ಪ್ರಕಾರ ದೇವಾಲಯದ ಬಾಗಿಲನ್ನು 6 ದಿನಗಳ ಮಾಸಿಕ ದರ್ಶನದ ಬಳಿಕ ನಿನ್ನೆ ರಾತ್ರಿ 10 ಗಂಟೆಗೆ ಬಂದ್ ಮಾಡಲಾಯಿತು. 
ನಿನ್ನೆಯಷ್ಟೇ ದೇಗುಲ ಹಾಗೂ ಅರ್ಜಿದಾರರ ಪರ ವಕೀಲರಾದ ಮ್ಯಾಥ್ಯೂ ಜೆ ನೆಡುಂಪಾರ ಅವರು ತೀರ್ಪು ಮರುಪರಿಶೀಲನಾ ಅರ್ಜಿಯನ್ನು ಪರಿಗಣಿಸುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿಕೊಂಡಿದ್ದರು. ತೀರ್ಪಿನ ವಿರುದ್ಧ 19 ಅರ್ಜಿಗಳು ಸಲ್ಲಿಕೆಯಾಗಿರುವುದಾಗಿ ತಿಳಿಸಿದ್ದರು. 
ಇದರಂತೆ ಈ ಮನವಿಯನ್ನು ಪರಿಗಣಿಸಿರುವ ನ್ಯಾಯಾಲಯ ನ.13 ರಂದು ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT