ರಾಕೇಶ್ ಅಸ್ತಾನ 
ದೇಶ

ಸಿಬಿಐ ಒಳಜಗಳ: ಅಸ್ತಾನ ವಿರುದ್ಧ ತನಿಖೆ ನಡೆಸುತ್ತಿದ್ದ ಅಧಿಕಾರಿ ಅಂಡಮಾನ್ ಗೆ ಎತ್ತಂಗಡಿ

ದೇಶದ ಅತ್ಯುನ್ನತ ತನಿಖಾ ಸಂಸ್ಥೆಯ ಆಂತರಿಕ ಕಲಹ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ...

ನವದೆಹಲಿ: ದೇಶದ ಅತ್ಯುನ್ನತ ತನಿಖಾ ಸಂಸ್ಥೆಯ ಆಂತರಿಕ ಕಲಹ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಕಡ್ಡಾಯ ರಜೆಯ ಮೇಲೆ ತೆರಳಿರುವ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿದ್ದ ಅಧಿಕಾರಿ ಎ.ಕೆ. ಬಸ್ಸಿಯವರನ್ನು ಅಂಡಮಾನ್ ಗೆ ವರ್ಗಾವಣೆ ಮಾಡಲಾಗಿದೆ.
ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಅವರನ್ನೂ ಕಡ್ಡಾಯ ರಜೆಯ ಮೇಲೆ ಕಳುಹಿಸಿದ ನಂತರ ಸಿಬಿಐ ನಿರ್ದೇಶಕರಾಗಿ ನಿನ್ನೆ ರಾತ್ರಿ ಅಧಿಕಾರ ವಹಿಸಿಕೊಂಡ ಎಂ. ನಾಗೇಶ್ವರ್ ರಾವ್ ಅವರು, ತನಿಖಾ ಸಂಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದಾರೆ.
ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಸ್ತಾನ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿದ್ದ ಡೆಪ್ಯುಟಿ ಪೊಲೀಸ್ ಅಧೀಕ್ಷಕ ಎ.ಕೆ.ಬಸ್ಸಿ ಅವರನ್ನು ಪೋರ್ಟ್ ಬ್ಲೇರ್ ವರ್ಗಾವಣೆ ಮಾಡಲಾಗಿದೆ ಎಂದು ಸಿಬಿಐ ತಿಳಿಸಿದೆ.
ನಾಗೇಶ್ವರ್ ರಾವ್ ಅವರು ಬಸ್ಸಿ ಸ್ಥಾನಕ್ಕೆ ಸತೀಶ್ ದಾಗರ್ ಅವರನ್ನು ನೇಮಕ ಮಾಡಿದ್ದು, ಅವರು ಅಸ್ತಾನ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸಲಿದ್ದಾರೆ.
ಸತೀಶ್ ದಾಗರ್ ಅವರು ಈ ಮುಂಚೆ ಡೆರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮೀತ್ ರಾಮ್  ರಹಿಮ್ ವಿರುದ್ಧ ತನಿಖೆ ನಡೆಸಿದ್ದರು.
ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಸ್ತಾನ ಹಾಗೂ ವರ್ಮಾ ಇಬ್ಬರನ್ನು ಕಡ್ಡಾಯ ರಜೆಯ ಮೇಲೆ ಮನೆಗೆ ಕಳುಹಿಸಿದ್ದು, ಇದನ್ನು ಪ್ರಶ್ಮಿಸಿ ಅಲೋಕ್ ವರ್ಮಾ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!