ಆಜಂ ಖಾನ್ 
ದೇಶ

'ಬಿಜೆಪಿಯವರಿಗೆ ನಾನೇ ಐಟಂ ಗರ್ಲ್​': ಆಜಂ ಖಾನ್​ ವ್ಯಂಗ್ಯ

ಆಡಳಿತರೂಢ ಬಿಜೆಪಿ ಚುನಾವಣೆ ಬಂದಾಗಲೆಲ್ಲ ನನ್ನ ಹೆಸರು ಬಳಸಿಕೊಳ್ಳುತ್ತಿದ್ದು, ಅವರಿಗೆ ಚುನಾವಣೆ ಎದುರಿಸಲು...

ಲಖನೌ: ಆಡಳಿತರೂಢ ಬಿಜೆಪಿ ಚುನಾವಣೆ ಬಂದಾಗಲೆಲ್ಲ ನನ್ನ ಹೆಸರು ಬಳಸಿಕೊಳ್ಳುತ್ತಿದ್ದು, ಅವರಿಗೆ ಚುನಾವಣೆ ಎದುರಿಸಲು ನಾನು ಐಟಂ ಗರ್ಲ್​ ಆಗಿಬಿಟ್ಟಿದ್ದೇನೆ ಎಂದು ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್​ ಬುಧವಾರ ಲೇವಡಿ ಮಾಡಿದ್ದಾರೆ.
ಕಳೆದ ಒಂದು ವಾರದಲ್ಲಿ ತಮ್ಮ ವಿರುದ್ಧ ಎರಡು ಎಫ್ಐಆರ್ ದಾಖಲಿಸಿದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಆಜಂ ಖಾನ್, ಬಿಜೆಪಿಯವರಿಗೆ ನಾನೇ ಐಟಂ ಗರ್ಲ್ ಆಗಿದ್ದು, ನನ್ನನ್ನು ಮುಂದಿಟ್ಟುಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದರು.
ಎರಡು ವರ್ಷದ ಹಿಂದೆ ನಾನು ಅಂಬೇಡ್ಕರ್​ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದೆ ಎಂದು ಈಗ ಮಾನನಷ್ಟ ಮೊಕದ್ದಮೆ ಹಾಕಿ ಎಫ್​ಐಆರ್​ ದಾಖಲಿಸಿರುವುದಾಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮುಸ್ಲಿಮರ ಮತ ಸೆಳೆಯಲು ನನ್ನ ಹೆಸರನ್ನು ಬಳಸಿಕೊಳ್ಳುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಹೀಗೆ ಮಾಡಿದೆ ಮತ್ತು ಮುಂದಿನ ಲೋಕಸಭೆ ಚುನಾವಣೆಯಲ್ಲೂ ನನ್ನ ಹೆಸರಿನಲ್ಲಿ ಚುನಾವಣೆ ಎದುರಿಸಲಿದೆ ಎಂದು ಆರೋಪಿಸಿದ್ದಾರೆ.
ಇದಕ್ಕು ಮುನ್ನ ಕಳೆದ ವರ್ಷ ಅಕ್ಟೋಬರ್​ನಲ್ಲಿ ರಾಜ್ಯಸಭಾ ಸದಸ್ಯ ಅಮರ್ ಸಿಂಗ್​ ತಮ್ಮ ಮಗಳ ಮೇಲೆ ಆ್ಯಸಿಡ್​ ಹಾಕುವುದಾಗಿ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿ ಆಜಂ ಖಾನ್​ ವಿರುದ್ಧ ಗೋಮ್ತಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆಗಲೂ ಎಫ್​ಐಆರ್​ ದಾಖಲಿಸಿಕೊಳ್ಳಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT