ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ನೌಗಾಮ್ ವಲಯದಲ್ಲಿ ಉಗ್ರರು ದಾಳಿ ನಡೆಸಿದ್ದು, ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಬುಧವಾರ ತಿಳಿದುಬಂದಿದೆ.
ಶ್ರೀನಗರ ಹೊರವಲಯವಾದ ನೌಗಾಮ್ ಸೂತು ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿಗಳು ಲಭ್ಯವಾದ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಸೇನಾಪಡೆಗಳು ಕಾರ್ಯಾಚರಣ ಆರಂಭಿಸುತ್ತಿದ್ದಂತೆಯೇ ಅಡಗಿಕುಳಿತಿದ್ದ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿರುವ ಸೇನಾಪಡೆಗಳು ದಿಟ್ಟ ಉತ್ತರವನ್ನೇ ನೀಡಿದ್ದು, ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಪ್ರಸ್ತುತ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿವೆ. ಈ ನಡುವೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಅಧಿಕಾರಿಗಳು ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದು ಎಂದು ಸ್ಥಳದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics