ಸಂಗ್ರಹ ಚಿತ್ರ 
ದೇಶ

ಕರುಣಾಜನಕ ಘಟನೆ: ಗಂಡನ ಅಂತ್ಯ ಸಂಸ್ಕಾರಕ್ಕೂ ಮುನ್ನ ಹೆಣ್ಣು ಮಗುವಿಗೆ ಜನ್ಮ ನೀಡಿದ ಹುತಾತ್ಮ ಯೋಧನ ಪತ್ನಿ!

ಭಯೋತ್ಪಾದಕರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ್ದ ಪತಿಯ ಚಿತೆಗೆ ಅಗ್ನಿ ಸ್ಪರ್ಶವಾಗಲು ಕೆಲವೇ ಕ್ಷಣಗಳು ಬಾಕಿಯಿರುವಾಗ ಆ ಯೋಧನ ಪತ್ನಿಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ...

ಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ್ದ ಪತಿಯ ಚಿತೆಗೆ ಅಗ್ನಿ ಸ್ಪರ್ಶವಾಗಲು ಕೆಲವೇ ಕ್ಷಣಗಳು ಬಾಕಿಯಿರುವಾಗ ಆ ಯೋಧನ ಪತ್ನಿಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 
36  ವರ್ಷದ ಹುತಾತ್ಮ ಯೋಧ ಲ್ಯಾನ್ಸ್ ನಾಯಕ್ ರಂಜೀತ್ ಸಿಂಗ್ ದಂಪತಿಗೆ 10 ವರ್ಷಗಳ ಬಳಿಕ ಮಗು ಹುಟ್ಟಿದ್ದು ಮಗುವಿನ ಮುಖವನ್ನು ನೋಡದೇ ರಂಜೀತ್ ಸಿಂಗ್ ಹುತಾತ್ಮರಾಗಿದ್ದು ಕುಟುಂಬದಲ್ಲಿ ನೀರವ ಮೌನ ಆವರಿಸಿದೆ. 
ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳುಕೋರರ ವಿರುದ್ಧ ನಡೆದ ಎನ್ ಕೌಂಟರ್ ನಲ್ಲಿ ರಂಜೀತ್ ಸಿಂಗ್ ಹುತಾತ್ಮರಾಗಿದ್ದರು. ರಂಜೀತ್ ರ ಪಾರ್ಥಿವ ಶರೀರ ಸೋಮವಾರ ಸುಲಿಗಾಮ್ ಗ್ರಾಮಕ್ಕೆ ಬಂದಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಂಗಳವಾರ ಬೆಳಗ್ಗೆ ಇವರ ಅಂತ್ಯ ಸಂಸ್ಕಾರ ನಡೆಸಲು ಸಿದ್ಧತೆ ನಡೆದಿತ್ತು. 
ಈ ಮಧ್ಯೆ ಸೋಮವಾರ ಮಧ್ಯರಾತ್ರಿ ವೇಳೆಗೆ ರಂಜೀತ್ ಅವರ ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಬೆಳಗ್ಗೆ ಪತಿಯ ಚಿತೆಗೆ ಅಗ್ನಿ ಸ್ಪರ್ಶ ಆಗುವ ಸ್ವಲ್ಪ ಹೊತ್ತಿಗೆ ಮುಂಚೆ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 
ನವಜಾತ ಶಿಶು ಹಾಗೂ ಬಾಣಂತಿಯನ್ನು ಆ್ಯಂಬುಲೇನ್ಸ್ ನಲ್ಲಿ ಕರೆದೊಯ್ದು ಪತಿಯ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಶಿಶುವನ್ನು ಹಿಡಿದು ಪತಿಯ ಪಾರ್ಥಿವ ಶರೀರದ ಮುಂದೆ ಪತ್ನಿ ನಿಂತಿದ್ದ ಹೃದಯ ವಿದ್ರಾವಕ ದೃಶ್ಯವನ್ನು ನೋಡಿ ಅಲ್ಲಿದ್ದವರ ಕಣ್ಣಾಲಿಗಳು ತುಂಬಿ ಬಂದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್