ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ವಾಹನ 
ದೇಶ

ಉತ್ತರ ಪ್ರದೇಶ: ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, 8 ಮಂದಿ ಸಾವು

ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಏಳು...

ಬದೌನ್‌: ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ 4 ಗಂಟೆಯ ಸುಮಾರಿಗೆ ಬದೌನ್‌ ದಿಂದ 6 ಕಿ.ಮೀ.ದೂರದಲ್ಲಿರುವ ರಸೂಲ್ ಪುರದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಪಟಾಕಿ ಸಂಗ್ರಹಿಸಿಟ್ಟಿದ್ದ ಕೋಣೆಯಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಓರ್ವ ಗಾಯಾಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಬದೌನ್ ಹಿರಿಯ ಪೊಲೀಸ್ ಅಧೀಕ್ಷಕ ಅಶೋಕ್ ಕುಮಾರ್ ಅವರು ತಿಳಿಸಿದ್ದಾರೆ.
ಸ್ಫೋಟದ ತೀವ್ರತೆಗೆ ಫ್ಯಾಕ್ಚರಿ ಸಮೀಪ ನಡೆದು ಹೋಗುತ್ತಿದ್ದ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ ಮತ್ತು ಸಮೀಪದ ಅಂಗಡಿಯಲ್ಲಿದ್ದ ಕೆಲವರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT