ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಶ್ಮೀರ: ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದ ಯೋಧ ರಾಜೇಂದ್ರ ಸಿಂಗ್ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದ ಯೋಧ...

ರಾಜೇಂದ್ರ ಸಿಂಗ್
Lingaraj Badiger
Updated On : 26 Oct 2018, 8:40 am
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದ ಯೋಧ ರಾಜೇಂದ್ರ ಸಿಂಗ್ ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಹುತಾತ್ಮರಾಗಿದ್ದಾರೆ.
ಭಾರತೀಯ ಸೇನೆಯ ಕ್ಷಿಪ್ರ ಕಾರ್ಯಾಚರಣೆ ಪಡೆ(ಕ್ಯೂಆರ್ ಟಿ)ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಜೇಂದ್ರ ಸಿಂಗ್ ಅವರ ವಾಹನದ ಮೇಲೆ ನಿನ್ನೆ ಅನಂತನಾಗ್ ಸಮೀಪದ ಬೈಪಾಸ್ ನಲ್ಲಿ ಕೆಲ ಯುವಕರು ಕಲ್ಲು ತೂರಿದ್ದರು.
ಕಲ್ಲು ತೂರಾಟದಲ್ಲಿ ರಾಜೇಂದ್ರ ಸಿಂಗ್ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು 92 ಬೇಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Advertisement

ಉತ್ತರ ಪ್ರದೇಶದ ಬದೌನ್ ಜಿಲ್ಲೆಯವರಾದ ರಾಜೇಂದ್ರ ಸಿಂಗ್ ಅವರು 2016ರಲ್ಲಿ ಭಾರತೀಯ ಸೇನೆ ಸೇರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement