ದೇಶ

ಸೊಪೋರ್ ಎನ್'ಕೌಂಟರ್: 2 ಉಗ್ರರ ಹತ್ಯೆ, ಓರ್ವ ಯೋಧ ಹುತಾತ್ಮ

Manjula VN
ಸೊಪೋರ್ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಟೌನ್ ನಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಸದೆಬಡಿದಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಸೊಪೋರ್ ನಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ದೊರಕಿದ ಹಿನ್ನಲೆಯಲ್ಲಿ ಸೇನೆ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದು. ಬಳಿಕ ಕಾರ್ಯಾಚರಣೆಯನ್ನು ಎನ್'ಕೌಂಟರ್ ಆಗಿ ಮಾರ್ಪಡಿಸಿದ ಸೇನೆ ಉಗ್ರರಿಗೆ ದಿಟ್ಟ ಉತ್ತರವನ್ನೇ ನೀಡಿತು. 
ಇದರಂತೆ ಇಬ್ಬರು ಉಗ್ರರನ್ನು ಸೇನಾಪಡೆಗಳು ಹತ್ಯೆ ಮಾಡಿದ್ದು, ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ವರದಿಗಳು ತಿಳಿಸಿವೆ. 
ನಿನ್ನೆಯಷ್ಟೇ ಅನಂತ್ ನಾಗ್ ಜಿಲ್ಲೆಯ ಬಿಬ್ಜೆಹಾರದ ಅರ್ವಾನಿ ಪ್ರದೇಶದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದ ಭದ್ರತಾಪಡೆಗಳು ನಾಲ್ವರು ಉಗ್ರರನ್ನು ಹತ್ಯೆ ಮಾಡಿತ್ತು. 
SCROLL FOR NEXT