ಅಮರಾವತಿ: ತಮ್ಮ ವಿರುದ್ಧದ ವೈಯಕ್ತಿಕ ಸೇಡು ತೀರಿಸಿಕೊಳ್ಳಲು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಆಂಧ್ರ ಪ್ರದೇಶವನ್ನು ಮುಗಿಸಲು ಸಂಚು ರೂಪಿಸಿದೆ ಎಂದು ಆಂಧ್ರ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಆರೋಪಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಆಂಧ್ರ ಪ್ರದೇಶದ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಆಂಧ್ರ ಸಿಎಂ ದೂರಿದ್ದಾರೆ.
ನಮ್ಮ ವಿರುದ್ಧ ಸಿಬಿಐ ತನಿಖೆಗೂ ಆದೇಶಿಸುವ ಸಾಧ್ಯತೆ ಇದೆ. ಆದರೆ ನೀವು ಏನೇ ಮಾಡಿದರೂ ರಾಜ್ಯದಲ್ಲಿ ತೆಲುಗು ದೇಶಂ ಪಾರ್ಟಿ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಆಂಧ್ರ ಸಿಎಂ ಹೇಳಿದ್ದಾರೆ.
ನಿನ್ನೆಯಷ್ಟೇ ಕೇಂದ್ರ ಸರ್ಕಾರ ಆಂಧ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಲು ಬಿಹಾರ ಮತ್ತು ಇತರೆ ರಾಜ್ಯಗಳಿಂದ ಗೂಂಡಾಗಳನ್ನು ತಂದು ಬಿಟ್ಟಿದೆ ಎಂದು ಚಂದ್ರಬಾಬು ನಾಯ್ಡು ವಾಗ್ದಾಳಿ ನಡೆಸಿದ್ದರು.
ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಆಂಧ್ರ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗನ್ ಮೋಹನ್ ರೆಡ್ಡಿ ಅವರಿಗೆ ಚಾಕು ಇರಿತ ಪ್ರಕರಣದ ನಂತರ ಕೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದ ಚಂದ್ರಬಾಬು ನಾಯ್ಡು, ಚೂರಿ ಇರಿತದ ಪ್ರಕರಣದ ಹಿಂದೆ ಮೋದಿ ಸರ್ಕಾರ ಕೈವಾಡವಿದೆ ಎಂದು ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics