ಥೆಂಕನಾಲ್: ಒಡಿಶಾದ ಧೆಂಕನಾಲ್ ಜಿಲ್ಲೆಯ ಕಾಮಲಂಗಾ ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ 7 ಕಾಡಾನೆಗಳು ಬಲಿಯಾಗಿರುವ ದಾರುಣ ಘಟನೆ ನಡೆದಿದೆ.
ನಿನ್ನೆ ಬೆಳಿಗ್ಗೆ 7 ಗಂಡೆ ಸುಮಾರಿಗೆ ಆನೆಗಳ ಶವಗಳನ್ನು ಕಂಡ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು ಆನೆಗಳ ಕಳೇಬರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಆನೆಗಳ ಸಾವಿನ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅಧಿಕಾರಿಗಳು, ನೀರಿನ ಹೊಂಡದ ಬಳಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಆನೆಗಳು ಮೃತಪಟ್ಟಿವೆ ಎಂದು ತಿಳಿಸಿದ್ದಾರೆ.