ಸಂಗ್ರಹ ಚಿತ್ರ 
ದೇಶ

ರಫೇಲ್ ಒಪ್ಪಂದ: ಸುಪ್ರೀಂಕೋರ್ಟ್'ಗೆ ವರದಿ ಸಲ್ಲಿಸಿದ ಕೇಂದ್ರ ಸರ್ಕಾರ

ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ಸುಪ್ರೀಂಕೋರ್ಟ್'ಗೆ ಶನಿವಾರ ಕೇಂದ್ರ ಸರ್ಕಾರ ವರದಿ ಸಲ್ಲಿಸಿದೆ ಎಂದು ತಿಳಿದುಬಂದಿದೆ...

ನವದೆಹಲಿ: ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ಸುಪ್ರೀಂಕೋರ್ಟ್'ಗೆ ಶನಿವಾರ ಕೇಂದ್ರ ಸರ್ಕಾರ ವರದಿ ಸಲ್ಲಿಸಿದೆ ಎಂದು ತಿಳಿದುಬಂದಿದೆ. 
ಭಾರತ ಮತ್ತು ಫ್ರಾನ್ಸ್ ನಡುವಣ ನಡೆದಿದ್ದ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಭಾರೀ ವಿವಾದವನ್ನುಂಟು ಮಾಡಿತ್ತು. ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ರಫೇಲ್ ಒಪ್ಪಂದದಲ್ಲಿ ಭಾರೀ ಭ್ರಷ್ಟಾಚಾರ ನಡೆಸಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. 
ರೂ.59 ಸಾವಿರ ಕೋಟಿ 36 ಯುದ್ಧ ವಿಮಾನಗಳನ್ನು ಫ್ರಾನ್ಸ್ ನಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಒಪ್ಪಂದದಲ್ಲಿ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಭಾರೀ ಅವ್ಯವಹಾರ ನಡೆಸಿದ್ದು, ಒಪ್ಪಂದ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಕೋರಿ ಎಂ.ಎಲ್.ಶರ್ಮಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 
ಈ ಅರ್ಜಿಯನ್ನು ಅ.10 ರಂದು ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿ ಎಸ್.ಕೆ. ಕೌಲ್ ಮತ್ತು ಕೆ.ಎಂ ಜೋಸೆಫ್ ಅವರನ್ನೊಳಗೊಂಡ ಪೀಠವು, ಅರ್ಜಿಗಳಲ್ಲಿ ಒಪ್ಪಂದ ಕುರಿತು ಮಾಡಲಾಗಿರುವ ಭ್ರಷ್ಟಾಚಾರ ಆರೋಪಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಆದರೆ, 29ರೊಳಗೆ ರಪೇ ಒಪ್ಪಂದ ನಿರ್ಧಾರ ಕೈಗೊಂಡ ಪ್ರಕ್ರಿಯೆ ಕುರಿತು ಮೊಹರು ಮಾಡಿದ ಲಕೋಟೆಯಲ್ಲಿ ವಿವರ ಸಲ್ಲಿಸುವಂತೆ ಸೂಚನೆ ನೀಡಿತ್ತು. 
ಸುಪ್ರೀಂಕೋರ್ಟ್ ಆದೇಶದಂತೆಯೇ ಇದೀಗ ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ವರದಿ ಸಲ್ಲಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್