ದೇಶ

ದೆಹಲಿಯಲ್ಲಿ ವಾಯುಮಾಲಿನ್ಯ ಮತ್ತೆ ಹೆಚ್ಚಳ, ನ.10ರವರೆಗೆ ಕಾರ್ ಕಡಿಮೆ ಬಳಸಿ: ಮಾಲಿನ್ಯ ನಿಯಂತ್ರಣ ಮಂಡಳಿ

Lingaraj Badiger
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಐದು ಪ್ರದೇಶಗಳಲ್ಲಿ ವಾಯುಮಾಲಿನ್ಯ ಮತ್ತೆ ಮಿತಿಮೀರಿದ್ದು, ದೀಪಾವಳಿ ಸಂದರ್ಭದಲ್ಲಿ ಮಾಲಿನ್ಯ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. 
ಮಾಲಿನ್ಯ ನಿಯಂತ್ರಿಸಲು ನವೆಂಬರ್ 1ರಿಂದ 10ರ ವರೆಗೆ 10 ದಿನಗಳ ಕಾಲ ಖಾಸಗಿ ವಾಹನಗಳ ಬಳಕಿ ಕಡಿಮೆ ಮಾಡುವಂತೆ, ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸುವಂತೆ ಮತ್ತು ಮನೆಯಿಂದ ಹೊರಗಡೆ ಹೋಗುವ ಯೋಜನೆಗೆ ಬ್ರೇಕ್ ಹಾಕುವಂತೆ ಕೇಂದ್ರ ಪರಿಸರ ನಿಯಂತ್ರಣ ಮಂಡಳಿಯ ಕಾರ್ಯಪಡೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಇಂದು ಪರಿಸರ ಸಚಿವಾಲಯದ ಅಧಿಕಾರಿಗಳು, ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ, ಹರಿಯಾಣ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ದೆಹಲಿಯ ವಾಯು ಗುಣಮಟ್ಟ ತುಂಬಾ ಕ್ಷೀಣಿಸುತ್ತಿದ್ದು, ಇದು ಮುಂದಿನ ಕೆಲ ದಿನಗಳವರೆಗೆ ಮುಂದುವರಿಯುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿ ಸಿದ್ಧಾರ್ಥ್ ಸಿಂಗ್ ಅವರು ಹೇಳಿದ್ದಾರೆ.
SCROLL FOR NEXT