ಕಾಂಗ್ರೆಸ್ ನಿಂದ ಮೋಸಕ್ಕೊಳಗಾದವರು #MeToo ಅಭಿಯಾನ ಆರಂಭಿಸುತ್ತಾರೆ: ರಾಜನಾಥ್ ಸಿಂಗ್
ನವದೆಹಲಿ: ಕಾಂಗ್ರೆಸ್ ಪಕ್ಷದಿಂದ ವಂಚನೆಗೊಳಗಾಗಿರುವವರು ಶೀಘ್ರವೇ #MeToo ಅಭಿಯಾನ ಕೈಗೊಳ್ಳಲಿದ್ದಾರೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವವರನ್ನು ಯಾರೂ ರಕ್ಷಿಸುವುದಕ್ಕೆ ಸಾಧ್ಯವಿಲ್ಲ. ಎಲ್ಲಾ ವಿಪಕ್ಷಗಳೂ ಒಟ್ಟಿಗೇ ಸೇರಿದರೆ ಪರಿಸ್ಥಿತಿ ಏನಾಗಬಹುದು? ಆ ನಂತರ ಕಾಂಗ್ರೆಸ್ ನಿಂದ ವಂಚನೆಗೊಳಗಾದವರು #MeToo ಅಭಿಯಾನ ಪ್ರಾರಂಭಿಸಲಿದ್ದಾರೆ ಎಂದು ರಾಜನಾಥ್ ಸಿಂಗ್ ವ್ಯಂಗ್ಯ ಧಾಟಿಯಲ್ಲಿ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಜೊತೆ ಕೈ ಜೋಡಿಸುತ್ತಿರುವವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮಾಜಿ ಕೇಂದ್ರ ಸಚಿವ ಬಿಜೆಪಿ ನಾಯಕರಾಗಿದ್ದ ಜಸ್ವಂತ್ ಸಿನ್ಹಾ ಪುತ್ರ ಮನ್ವೀಂದರ್ ಸಿನ್ಹಾ ಹಾಗೂ ಮಹಾರಾಷ್ಟ್ರದ ಮಾಜಿ ಬಿಜೆಪಿ ಶಾಸಕ ಆಶಿಶ್ ದೇಶ್ಮುಖ್ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಗ್ಗೆ ರಾಜನಾಥ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ.