ಪಾಟ್ನಾ: ಲೋಕಸಭಾ ಚುನಾವಣೆಗೆ ಬಿಹಾರದಲ್ಲಿ ಬಿಜೆಪಿ-ಎನ್ ಡಿಎ ಮೈತ್ರಿಕೂಟದ ಸ್ಥಾನಗಳ ಹಂಚಿಕೆ ಸೂತ್ರ ಕೊನೆಗೂ ಯಶಸ್ವಿಯಾದಂತಿದ್ದು, ಬಿಜೆಪಿಯ ಸ್ಥಾನ ಹಂಚಿಕೆ ಸೂತ್ರಕ್ಕೆ ಎನ್ ಡಿಎ ಮೈತ್ರಿಕೂಟದ ಪಕ್ಷಗಳೂ ಒಪ್ಪಿಗೆ ಸೂಚಿಸಿವೆ.
ಎನ್ ಡಿಎ ಮಿತ್ರಪಕ್ಷವಾಗಿರುವ ಆರ್ ಎಲ್ಎಸ್ ಪಿ ತಾನು ಎನ್ ಡಿಎ ಮೈತ್ರಿಕೂಟದಲ್ಲೇ ಇರುವುದಾಗಿ ಸ್ಪಷ್ಟಪಡಿಸಿದೆ. ಬಿಜೆಪಿ ಮತ್ತು ಜೆಡಿಎಸ್ ಸಮಾನ ಕ್ಷೇತ್ರಗಳಲ್ಲಿ ಸ್ಫರ್ಧಿಸಲಿವೆ ಹಾಗೂ ಎನ್ ಡಿಎ ಮಿತ್ರ ಪಕ್ಷಗಳಾದ ಎಲ್ ಜೆಪಿ ಮತ್ತು ಆರ್ ಎಲ್ ಎಸ್ ಪಿ ಸೀಟ್ ಹಂಚಿಕೆ ಸೂತ್ರದ ಪ್ರಕಾರ ಸ್ಥಾನಗಳನ್ನು ಪಡೆಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯ
ಇದಕ್ಕೂ ಮುನ್ನ ಆರ್ ಎಲ್ಎಸ್ ಪಿ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ಉಪೇಂದ್ರ ಕುಷ್ವಾಹ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದ ಬಳಿಕ ಆರ್ ಎಲ್ಎಸ್ ಪಿ ಎನ್ಡಿಎ ಮೈತ್ರಿಕೂಟದಿಂದ ಹೊರಬರಲಿದೆ ಎಂದು ವಿಶ್ಲೇಷಿಸಲಾಗುತ್ತಿತ್ತು. ಆದರೆ ಈ ಊಹಾಪೋಹಗಳಿಗೆ ತೆರೆ ಎಳೆದಿರುವ ಆರ್ ಎಲ್ಎಸ್ ಪಿ ಎನ್ ಡಿಎ ಮೈತ್ರಿಕೂಟದಿಂದ ಹೊರಬರುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.