ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಸರ್ದಾರ್ ಪಟೇಲ್ 'ಮಹಾ ದಾರ್ಶನಿಕ', ಒಗ್ಗಟ್ಟನಿಂದ ಎಲ್ಲರೂ ಮುನ್ನಡೆಯೋಣ: ಪ್ರಧಾನಿ ಮೋದಿ

ಭಾರತದ ಮೊದಲ ಗೃಹ ಮಂತ್ರಿ ಹಾಗೂ ಉಕ್ಕಿನ ಮನುಷ್ಯರೆಂದೇ ಖ್ಯಾತರಾಗಿದ್ದ ಸರ್ಕಾರ್ ಪಟೇಲ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 49ನೇ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಹಾಡಿ ಹೊಗಳಿದ್ದಾರೆ...

ನವದೆಹಲಿ: ಭಾರತದ ಮೊದಲ ಗೃಹ ಮಂತ್ರಿ ಹಾಗೂ ಉಕ್ಕಿನ ಮನುಷ್ಯರೆಂದೇ ಖ್ಯಾತರಾಗಿದ್ದ ಸರ್ಕಾರ್ ಪಟೇಲ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 49ನೇ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಹಾಡಿ ಹೊಗಳಿದ್ದಾರೆ. 
ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಮಹಾ ದಾರ್ಶನಿಕ ವ್ಯಕ್ತಿ. ಸ್ವಾತಂತ್ರ್ಯಕ್ಕಾಗಿ ಎಲ್ಲರನ್ನೂ ಒಗ್ಗೂಡಿಸಿದ್ದರು. ಅ.31 ರಂದು ಪಟೇಲ್ ಅವರ ಜನ್ಮ ದಿನವಾಗಿದ್ದು, ಅಂದು ನಮ್ಮ ದೇಶದ ಯುವಕರು 'ರನ್ ಫಾರ್ ಯುನಿಟಿ'ಯಲ್ಲಿ ಭಾಗಿಯಾಗಬೇಕು. 'ರನ್ ಫಾರ್ ಯುನಿಟಿ'ಯಲ್ಲಿ ಪಾಲ್ಗೊಳ್ಳುವಂತೆ ಪ್ರತೀಯೊಬ್ಬರಿಗೂ ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ. 
ಈ ಬಾರಿ ಪಟೇಲ್ ಅವರ ಜನ್ಮ ದಿನಾಚರಣೆ ಅತ್ಯಂತ ವಿಶೇಷ ದಿನವಾಗಿದೆ. ಪಟೇಲ್ ಅವರ ಜನ್ಮದಿನಾಚರಣೆಯಂದು ನರ್ಮದಾ ನದಿ ಬಳಿ ನಿರ್ಮಾಣಗೊಂಡಿರುವ  ಸ್ಟ್ಯಾಚು ಆಫ್ ಯುನಿಟಿಯನ್ನು ದೇಶಕ್ಕೆ ಸಮರ್ಪಿಸುತ್ತಿದ್ದೇವೆ. ಈ ಪ್ರತಿಮೆ ಅಮೆರಿಕಾದ ಸ್ಟ್ಯಾಚು ಆಫ್ ಲಿಬರ್ಟಿಗಿಂದಲೂ ಎರಡು ಪಟ್ಟು ಎತ್ತರವನ್ನು ಹೊಂದಿದೆ. ಸರ್ದಾರ್ ರಂತೆ ಅವರ ಪ್ರತಿಮೆ ಕೂಡ ಭಾರತದ ಹೆಮ್ಮೆಯಾಗಲಿದೆ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣಿಕ್ ಶಾ ಅವರ ಸಂದರ್ಶನದ ಕುರಿತಂತೆ ಮಾತನಾಡಿದ ಪ್ರಧಾನಿ ಮೋದಿಯವರು, ವೀರ ಯೋಧರಿಗೆ ಸೆಲ್ಯೂಟ್ ಹೊಡೆದಿದ್ದಾರೆ. 
ಈ ಬಾರಿಯ ನವೆಂಬರ್ 11 ರಂದು ವಿಶೇಷ ದಿನವಾಗಿದೆ. ಅಂದು ಮೊದಲನೇ ವಿಶ್ವ ಯುದ್ಧ ನಡೆದು 100 ವರ್ಷಗಳಾಗುತ್ತವೆ. ನಮ್ಮ ಯೋಧರು ಯುದ್ಧದಲ್ಲಿ ಸಾಕಷ್ಟು ತ್ಯಾಗ ಹಾಗೂ ಬಲಿದಾನ ಮಾಡಿದ್ದರು. ಯುದ್ಧ ನಡೆದಾಗ ನಾವು ಎರಡನೆಯವರಾಗಿರುತ್ತೇವೆಂಬುದನ್ನ ನಮ್ಮ ಯೋಧರು ಇಡೀ ವಿಶ್ವಕ್ಕೆ ತೋರಿಸಿದ್ದರು ಎಂದು ಹೇಳಿದ್ದಾರೆ. 
ಇದೇ ವೇಳೆ ಏಷ್ಯನ್ ಗೇಮ್ಸ್ ಹಾಗೂ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಅಪ್ರತಿಮ ಸಾಧನೆ ಪ್ರದರ್ಶಿಸಿದ ಭಾರತೀಯ ಕ್ರೀಡಾಪಟುಗಳನ್ನು ಮೋದಿ ಕೊಂಡಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!