ಕೋರ್ಟ್ ತೀರ್ಪಿಗೆ ಕಾಯಲು ಆಗಲ್ಲ, ರಾಮಮಂದಿರ ನಿರ್ಮಾಣಕ್ಕೆ ಮೋದಿ ಸರ್ಕಾರ ಕಾನೂನು ರೂಪಿಸಲಿ: ವಿಹೆಚ್ಪಿ
ಅಯೋಧ್ಯ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆಯನ್ನು 2019ರ ಜನವರಿ ತಿಂಗಳಿಗೆ ಮುಂದೂಡಿದೆ...
ನವದೆಹಲಿ: ಅಯೋಧ್ಯ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆಯನ್ನು 2019ರ ಜನವರಿ ತಿಂಗಳಿಗೆ ಮುಂದೂಡಿದೆ. ಇದರಿಂದ ಬೇಸರಗೊಂಡಿರುವ ವಿಶ್ವ ಹಿಂದೂ ಪರಿಷತ್(ವಿಹೆಚ್ಪಿ) ಕೋರ್ಟ್ ತೀಪ್ರಿಗೆ ಶಾಶ್ವತವಾಗಿ ಕಾಯಲು ಸಾಧ್ಯವಿಲ್ಲ. ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಕಾನೂನು ರೂಪಿಸಲಿ ಎಂದು ಆಗ್ರಹಿಸಿದೆ.
ಚಳಿಗಾಲದ ಅಧಿವೇಶನದಲ್ಲಿ ರಾಮಮಂದಿರ ನಿರ್ಮಾಣ ಕುರಿತಂತೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತರಬೇಕು ಎಂದು ವಿಹೆಚ್ಪಿ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ಪ್ರಧಾನಿ ಮೋದಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬಹುಬೇಗ ಪ್ರಕರಣದ ತೀರ್ಪು ಬರುತ್ತದೆ ಎಂದು ವಿಹೆಚ್ಪಿ ಭಾವಿಸಿತ್ತು. ಆದರೆ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮುಂದಿನ ಜನವರಿ ತಿಂಗಳಿಗೆ ಮುಂದೂಡಿದೆ.
ಕಳೆದ ಹಲವು ವರ್ಷಗಳಿಂದ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರಣೆ ನಡೆಯುತ್ತಿದ್ದು ಇದಕ್ಕೆ ತಾರ್ಕಿಕ ಅಂತ್ಯ ಕಾಣದ ಹಿನ್ನಲೆಯಲ್ಲಿ ಬೇಸರಗೊಂಡಿರುವ ವಿಹೆಚ್ಪಿ ನಮಗೆ ಕಾದು ಕಾದು ಸುಸ್ತಾಗಿದೆ. ಇನ್ನು ಎಷ್ಟು ವರ್ಷ ಕಾಯಬೇಕು. ಕೋರ್ಟ್ ತೀರ್ಪಿಗೆ ನಾವು ಶಾಶ್ವತವಾಗಿ ಕಾಯಲು ಸಿದ್ದರಿಲ್ಲ ಎಂದಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.