ರಾಮಮಂದಿರಕ್ಕಾಗಿ ಚಳಿಗಾಲದ ಅಧಿವೇಶನದಲ್ಲಿ ಸುಗ್ರೀವಾಜ್ಞೆ ಜಾರಿಗೆ ತನ್ನಿ: ವಿಹೆಚ್ ಪಿ
ನವದೆಹಲಿ: ರಾಮಜನ್ಮ ಭೂಮಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ 2019 ಕ್ಕೆ ಕಾಯ್ದಿರಿಸಿರುವ ಬೆನ್ನಲ್ಲೆ ಹಿಂದೂ ಸಂಘಟನೆಗಳು ಸುಗ್ರೀವಾಜ್ಞೆಗೆ ಒತ್ತಾಯಿಸಿವೆ.
ಸುಪ್ರೀಂ ಕೋರ್ಟ್ ರಾಮಜನ್ಮಭೂಮಿ ವಿವಾದದ ವಿಚಾರಣೆಯನ್ನು ಮತ್ತೊಮ್ಮೆ ಮುಂದೂಡಿದೆ. "ರಾಮ ಮಂದಿರ ನಿರ್ಮಾಣಕ್ಕೆ ವಿಚಾರಣೆ, ಮೇಲ್ಮನವಿಗಳನ್ನೇ ಶಾಶ್ವತವಾಗಿ ಕಾಯುವುದು ಪರಿಹಾರವಲ್ಲ" ಎಂಬ ನಮ್ಮ ನಿಲುವನ್ನು ಈ ಬೆಳವಣಿಗೆ ಮತ್ತಷ್ಟು ಬಲಪಡಿಸಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ ಕಾನೂನು ಜಾರಿಯಾಗಬೇಕೆಂದು ವಿಶ್ವಹಿಂದೂ ಪರಿಷತ್ ಒತ್ತಾಯಿಸಿದೆ.
ವಿಚಾರಣೆ ಮುಂದೂಡಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಹೆಚ್ ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ಸಧ್ಯದಲ್ಲೇ ಚಳಿಗಾಲದ ಅಧಿವೇಶನ ನಡೆಯಲಿದೆ, ಅಧಿವೇಶನದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ಜಾರಿಗೆ ತರುವುದು ಸೂಕ್ತ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
ಒಂದು ವೇಳೆ ಸರ್ಕಾರ ಸುಗ್ರೀವಾಜ್ಞೆಗೆ ಜಾರಿಗೆ ತರಲು ಸರ್ಕಾರ ವಿಫಲವಾದರೆ ಪ್ರಯಾಗ್ ರಾಜ್ ನಲ್ಲಿ ನಡೆಯಲಿರುವ ಕುಂಭಮೇಳದಲ್ಲಿ ಸಂತರ ಮುಂದಿಡುವುದಾಗಿ ಅಲೋಕ್ ಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics