ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳ : ಅವಳಿ ಜವಳಿ ಹೆಣ್ಣು ಮಕ್ಕಳನ್ನು ಮಾರಾಟ ಮಾಡಿದ್ದ ವ್ಯಕ್ತಿ ಬಂಧನ

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ 2 ತಿಂಗಳ ಅವಳಿ ಜವಳಿ ಹೆಣ್ಣು ಮಕ್ಕಳನ್ನು 1.8 ಲಕ್ಷ ರೂಗೆ ಮಾರಾಟ ಮಾಡಿದ್ದ ವ್ಯಕ್ತಿಯೊಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

 ಕೊಲ್ಕತ್ತಾ : ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ  2 ತಿಂಗಳ ಅವಳಿ ಜವಳಿ ಹೆಣ್ಣು ಮಕ್ಕಳನ್ನು  1.8 ಲಕ್ಷ ರೂಗೆ  ಮಾರಾಟ ಮಾಡಿದ್ದ ವ್ಯಕ್ತಿಯೊಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ರತನ್ ಬ್ರಹ್ಮ ತನ್ನ ಅವಳಿ ಜವಳಿ ಮಕ್ಕಳನ್ನು  ಅಕ್ಟೋಬರ್ 26 ರಂದು  ಮಾರಾಟ  ಮಾಡಿದ್ದ. ಈ ಬಗ್ಗೆ ರಾಮಚಂದ್ರ ಪುರ ಬಡೂರಿಯಾ ಪ್ರದೇಶದಲ್ಲಿ ಕೆಲ ನಿವಾಸಿಗಳು ನೀಡಿದ ಮಾಹಿತಿ ಆಧಾರದ ಮೇಲೆ  ಆತನನ್ನು ಬಂಧಿಸಲಾಗಿದ್ದು,  1.45 ಲಕ್ಷ ರೂಪಾಯಿ ಹಣವನ್ನು ಆತನಿಂದ ವಶಕ್ಕೆ ಪಡೆಯಲಾಗಿದೆ ಎಂದು ಗೈಗಾಟ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ತಂದೆಯನ್ನು ಮಾತ್ರ ಬಂಧಿಸಲಾಗಿದೆ. ಆದರೆ, ಆತನ ಪತ್ನಿಯನ್ನು  ವಿಚಾರಣೆಗೊಳಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ಬಿಗಿ ಪಟ್ಟು; ವಿಧಾನಸಭೆಯಲ್ಲಿ ತೀವ್ರ ಕೋಲಾಹಲ