ತನ್ನ ಎರಡೂ ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ತಂದೆ: 2 ವರ್ಷದ ಮಗು ಸಾವು! 
ದೇಶ

ತನ್ನ ಎರಡೂ ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ತಂದೆ: 2 ವರ್ಷದ ಮಗು ಸಾವು!

ವ್ಯಕ್ತಿಯೋರ್ವ ತನ್ನ 2 ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಲಘಟ್ಟಪುರದ ಅಂಜನನಗರದಲ್ಲಿ ನಡೆದಿದೆ.

ಬೆಂಗಳೂರು: ವ್ಯಕ್ತಿಯೋರ್ವ ತನ್ನ 2 ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಲಘಟ್ಟಪುರದ ಅಂಜನನಗರದಲ್ಲಿ ನಡೆದಿದೆ. 
ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ಶ್ರೀನಿವಾಸ ಮೂರ್ತಿ ಎಂಬುವವರು 2 ಹಾಗೂ 5 ವರ್ಷದ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ಘಟನೆಯಲ್ಲಿ 2 ವರ್ಷದ ಮಗು ಮೃತಪಟ್ಟಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀನಿವಾಸ್ ಮೂರ್ತಿ ಹಾಗೂ 5 ವರ್ಷದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. 
ಪತ್ನಿಯೊಂದಿಗೆ ನಿರಂತರ ವಾಗ್ವಾದದಿಂದಾಗಿ ಬೇಸತ್ತಿದ್ದ ವ್ಯಕ್ತಿ ತನ್ನ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಧ್ಯ ವ್ಯಸನಿಯಾಗಿದ್ದ ಶ್ರೀನಿವಾಸ್ ಮೂರ್ತಿಯನ್ನು ತೊರೆದಿದ್ದ  ಪತ್ನಿ ಪ್ರೇಮಲತ ತವರುಮನೆಯಲ್ಲಿದ್ದರು. ವಾಪಸ್ ಮನೆಗೆ ಬರುವಂತೆ ಒತ್ತಾಯಿಸಿದ್ದರೂ ಆಕೆ ಬಂದಿರಲಿಲ ಇದರಿಂದ ಬೇಸತ್ತು ಸೇಡು ತೀರಿಸಿಕೊಳ್ಳುವುದಕ್ಕೆ ಮುಂದಾದ ಶ್ರೀನಿವಾಸ್ ಮೂರ್ತಿ ಮಕ್ಕಳಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ