ನವದೆಹಲಿ: ಉತ್ತರ ಪ್ರದೇಶದ ಹಸೀಂಪುರ ಗಲಭೆ ಪ್ರಕರಣಕ್ಕೆ 31 ವರ್ಷಗಳ ನಂತರ ತೀರ್ಪು ಪ್ರಕಟಗೊಂಡಿದ್ದು 16 ಪೊಲೀಸ್ ಅಧಿಕಾರಿಗಳಿಗೆ ದೆಹಲಿ ಹೈಕೋರ್ಟ್ ಜೀವಾವಧಿ ಜೈಲು ಶಿಕ್ಷೆ ವಿಧಿಸಿದೆ.
ಗಲಭೆ ವೇಳೆ ಅಲ್ಪಸಂಖ್ಯಾತ ಸಮುದಾಯದ 42 ಜನರನ್ನು ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಈಗ ದೆಹಲಿ ಹೈಕೋರ್ಟ್ 16 ಪೊಲೀಸ್ ಅಧಿಕಾರಿಗಳನ್ನು ದೋಷಿಗಳೆಂದು ತೀರ್ಪು ಪ್ರಕಟಿಸಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ. ಜಿಲ್ಲಾ ನ್ಯಾಯಾಲಯ ನೀಡಿದ್ದ ತೀರ್ಪಿನಲ್ಲಿ ಆರೋಪಿಗಳನ್ನು ನಿರ್ದೋಷಿಗಳೆಂದು ಹೇಳಲಾಗಿತ್ತು. ಆದರೆ ದೆಹಲಿ ಹೈಕೋರ್ಟ್ ನಲ್ಲಿ ಆರೋಪಿಗಳ ಅಪರಾಧ ಸಾಬೀತಾಗಿದೆ.