ಪಿ. ಚಿದಂಬರಂ 
ದೇಶ

ಏರ್ ಸೆಲ್‌–ಮ್ಯಾಕ್ಸಿಸ್‌ ಹಗರಣ: ತನಿಖೆಗೆ ಸಹಕರಿಸದ ಚಿದಂಬರಂರನ್ನು ಕಸ್ಟಡಿಗೆ ಒಪ್ಪಿಸಿ - ಇಡಿ

ಏರ್ ​ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ....

ನವದೆಹಲಿ: ಏರ್ ​ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರಿಗೆ ನೀಡಿದ ನಿರೀಕ್ಷಣಾ ಜಾಮೀನಿಗೆ ಜಾರಿ ನಿರ್ದೇಶನಲಾಯ(ಇಡಿ) ಬುಧವಾರ ತೀವ್ರ ವಿರೋಧ ವ್ಯಕ್ತಿಪಡಿಸಿದೆ.
ಪ್ರಕರಣದಲ್ಲಿ ಆರೋಪಿಯಾಗಿರುವ ಚಿದಂಬರಂ ಅವರು ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ಹೀಗಾಗಿ ಅವರನ್ನ ವಿಚಾರಣೆಗೊಳಪಡಿಸಲು ತಮ್ಮ ವಶಕ್ಕೆ ಒಪ್ಪಿಸಿ ಎಂದು ಜಾರಿ ನಿರ್ದೇಶನಾಲಯ ಇಂದು ದೆಹಲಿ ಹೈಕೋರ್ಟ್​ಗೆ ಮನವಿ ಮಾಡಿದೆ. 
ಚಿದಂಬರಂ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅದಕ್ಕೆ ಪ್ರತಿಯಾಗಿ ಇಡಿ ಈ ಮನವಿ ಮಾಡಿದೆ.
ಸಿಬಿಐ ವಿಶೇಷ ನ್ಯಾಯಾಧೀಶ ಒ.ಪಿ. ಸೈನಿ ಅವರು ನಾಳೆ ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದ್ದಾರೆ.
ಏರ್ ​ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 25ರಂದು  ಜಾರಿ ನಿರ್ದೇಶನಾಲಯ ಚಿದಂಬರಂ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ದಾಖಲಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!